ADVERTISEMENT

ಶೆಟ್ಟರ್ ಫೌಂಡೇಷನ್‌ನಿಂದ ಪುತ್ಥಳಿ ಸ್ವಚ್ಛತೆ

​ಪ್ರಜಾವಾಣಿ ವಾರ್ತೆ
Published 14 ನವೆಂಬರ್ 2022, 5:47 IST
Last Updated 14 ನವೆಂಬರ್ 2022, 5:47 IST
ಎಸ್.ಎಸ್. ಶೆಟ್ಟರ್ ಫೌಂಡೇಷನ್ ವತಿಯಿಂದ ಹುಬ್ಬಳ್ಳಿಯ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆಯನ್ನು ಸ್ವಚ್ಛಗೊಳಿಸಲಾಯಿತು. ಫೌಂಡೇಷನ್ ಅಧ್ಯಕ್ಷ ಸಂಕಲ್ಪ ಶೆಟ್ಟರ್ ಇದ್ದಾರೆ
ಎಸ್.ಎಸ್. ಶೆಟ್ಟರ್ ಫೌಂಡೇಷನ್ ವತಿಯಿಂದ ಹುಬ್ಬಳ್ಳಿಯ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆಯನ್ನು ಸ್ವಚ್ಛಗೊಳಿಸಲಾಯಿತು. ಫೌಂಡೇಷನ್ ಅಧ್ಯಕ್ಷ ಸಂಕಲ್ಪ ಶೆಟ್ಟರ್ ಇದ್ದಾರೆ   

ಹುಬ್ಬಳ್ಳಿ: ನಗರದ ಎಸ್.ಎಸ್. ಶೆಟ್ಟರ್ ಫೌಂಡೇಷನ್ ವತಿಯಿಂದ ನಗರದಲ್ಲಿರುವ ಮಹಾನ್ ಪುರುಷರ ಪುತ್ಥಳಿಗಳನ್ನು ಸ್ವಚ್ಛಗೊಳಿಸುವ ಅಭಿಯಾನ ಭಾನುವಾರ ಜರುಗಿತು.

ಫೌಂಡೇಷನ್ ಅಧ್ಯಕ್ಷ ಸಂಕಲ್ಪ ಶೆಟ್ಟರ್ ನೇತೃತ್ವದಲ್ಲಿ ರೈಲು ನಿಲ್ದಾಣ ಬಳಿಯ ಸ್ವಾಮಿ ವಿವೇಕಾನಂದ, ಅಂಚೆ ಕಚೇರಿ ಬಳಿಯ ಡಾ.ಬಿ.ಆರ್. ಅಂಬೇಡ್ಕರ್, ಸಿದ್ದಪ್ಪ ಕಂಬಳಿ, ಸಂಗೊಳ್ಳಿ ರಾಯಣ್ಣ, ಬಸವಣ್ಣ, ರಾಣಿ ಚನ್ನಮ್ಮ ಪ್ರತಿಮೆ–ಪುತ್ಥಳಿಗಳನ್ನು ಸದಸ್ಯರು ಸ್ವಚ್ಛಗೊಳಿಸಿದರು.

‘ವಿವೇಕಾನಂದ ಅವರು ನಮಗೆ ಧರ್ಮ ಮತ್ತು ಜೀವನದ ಸಾರವನ್ನು ತಿಳಿಸಿ ಕೊಟ್ಟಿದ್ದರೆ, ಅಂಬೇಡ್ಕರ್ ಅವರು ಸಂವಿಧಾನದ ಮೂಲಕ ಸಮಾನತೆಯನ್ನು ಸಾರಿದ್ದಾರೆ. ಕಂಬಳಿ ಅವರು ಧಾರವಾಡಕ್ಕೆ ವಿಶೇಷ ಕೊಡುಗೆ ನೀಡಿದ್ದರೆ, ಚನ್ನಮ್ಮ ಮತ್ತು ರಾಯಣ್ಣ ಬ್ರಿಟಿಷರ ವಿರುದ್ಧ ಹೋರಾಡಿದ್ದಾರೆ. ಬಸವಣ್ಣನವರು ಕಾಯಕದ ಮಹತ್ವ ತಿಳಿಸಿ ಕೊಟ್ಟಿದ್ದಾರೆ. ಅಂತಹವರ ಪುತ್ಥಳಿಗಳನ್ನು ಸ್ವಚ್ಛಗೊಳಿಸುವ ಅವಕಾಶ ಸಿಕ್ಕಿದ್ದು ನಮ್ಮೆಲ್ಲರ ಭಾಗ್ಯ’ ಎಂದು ಸಂಕಲ್ಪ ಹೇಳಿದರು.

ADVERTISEMENT

ಬಿಜೆಪಿ ಮುಖಂಡರಾದ ನಾಗೇಶ ಕಲಬುರ್ಗಿ, ಈಶ್ವರಗೌಡ ಪಾಟೀಲ ಹಾಗೂ ಫೌಂಡೇಷನ್ ಸದಸ್ಯರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.