ADVERTISEMENT

ಸಹಕಾರ ರಂಗ ಅಭಿವೃದ್ಧಿಗೆ ಶ್ರಮಿಸಿ

ಕೆಸಿಸಿ ಬ್ಯಾಂಕ್ ನಿರ್ದೇಶಕ ಮಂಜುನಾಥಗೌಡ ಮುರಳ್ಳಿ ಕರೆ

​ಪ್ರಜಾವಾಣಿ ವಾರ್ತೆ
Published 20 ನವೆಂಬರ್ 2024, 15:58 IST
Last Updated 20 ನವೆಂಬರ್ 2024, 15:58 IST
ಕಲಘಟಗಿ ಪಟ್ಟಣದಲ್ಲಿ ನಡೆದ ಸಹಕಾರ ಸಪ್ತಾಹ ಕಾರ್ಯಕ್ರಮವನ್ನು ಕೆಎಂಎಫ್ ಅಧ್ಯಕ್ಷ ಶಂಕರ ಮುಗದ ಹಾಗೂ ಕೆಸಿಸಿ ಬ್ಯಾಂಕ್ ನಿರ್ದೇಶಕ ಮಂಜುನಾಥಗೌಡ ಮುರಳ್ಳಿ ಉದ್ಘಾಟಿಸಿದರು
ಕಲಘಟಗಿ ಪಟ್ಟಣದಲ್ಲಿ ನಡೆದ ಸಹಕಾರ ಸಪ್ತಾಹ ಕಾರ್ಯಕ್ರಮವನ್ನು ಕೆಎಂಎಫ್ ಅಧ್ಯಕ್ಷ ಶಂಕರ ಮುಗದ ಹಾಗೂ ಕೆಸಿಸಿ ಬ್ಯಾಂಕ್ ನಿರ್ದೇಶಕ ಮಂಜುನಾಥಗೌಡ ಮುರಳ್ಳಿ ಉದ್ಘಾಟಿಸಿದರು   

ಕಲಘಟಗಿ: ‘ಸಹಕಾರ ಸಂಘಗಳು ರೈತರಿಗೆ ಹಾಗೂ ಮಹಿಳಾ ಸಂಘಗಳಿಗೆ ಸಾಲ ನೀಡುವ ಮೂಲಕ ಅವರ ಏಳಿಗೆಗೆ ಶ್ರಮಿಸುತ್ತಿವೆ’ ಎಂದು ಕೆಸಿಸಿ ಬ್ಯಾಂಕ್ ನಿರ್ದೇಶಕ ಮಂಜುನಾಥಗೌಡ ಮುರಳ್ಳಿ ಹೇಳಿದರು.

ಪಟ್ಟಣದ ಹನ್ನೆರಡು ಮಠದ ಸಭಾಭವನದಲ್ಲಿ ಧಾರವಾಡ ಜಿಲ್ಲಾ ಸಹಕಾರ ಯೂನಿಯನ್, ಕೆಸಿಸಿ ಬ್ಯಾಂಕ್, ತಾಲ್ಲೂಕಿನ ಸಹಕಾರ ಸಂಸ್ಥೆಗಳ ಹಾಗೂ ಸಹಕಾರ ಇಲಾಖೆ ಆಶ್ರಯದಲ್ಲಿ ಬುಧವಾರ ನಡೆದ 71ನೇ ಸಹಕಾರ ಸಪ್ತಾಹ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ಸಹಕಾರ ಸಂಘಗಳು ಬೆಳವಣಿಗೆ ಹೊಂದಬೇಕಾದರೆ ಪಕ್ಷ ಭೇದ ಮರೆತು ಎಲ್ಲರೂ ಸಹಕಾರ ನೀಡಿದಾಗ ಅಭಿವೃದ್ಧಿಯತ್ತ ಸಾಗುತ್ತದೆ’ ಎಂದರು.

ADVERTISEMENT

ಕೆಎಂಎಫ್ ಅಧ್ಯಕ್ಷ ಶಂಕರ ಮುಗದ ಮಾತನಾಡಿ, ‘ಹಾಲು ಉತ್ಪಾದಕರ ಸಹಕಾರ ಹಾಗೂ ಕೆಸಿಸಿ ಬ್ಯಾಂಕಿನ ಕೃಷಿ ಪತ್ತಿನ ಸಹಕಾರ ಸಂಘಗಳ ಸಹಕಾರದಿಂದ ಗ್ರಾಮೀಣ ಜನರ ಬದುಕು ಹಸನಾಗಿಸುತ್ತಿವೆ. ಮೂರು ಜಿಲ್ಲೆ ಒಳಗೊಂಡ ಹಾಲು ಉತ್ಪಾದಕರ ಸಹಕಾರ ಸಂಘವು 1.80 ಲಕ್ಷ ಲೀಟರ್ ಹಾಲು ಶೇಖರಣೆ ಮಾಡುವ ಹಂತಕ್ಕೆ ತಲುಪಿದೆ’ ಎಂದು ಸಂತೋಷ ವ್ಯಕ್ತಪಡಿಸಿದರು.

ಕೃಷಿ ಪತ್ತಿನ ಸಹಕಾರ ಸಂಘಗಳ ಮೂಲಕ ರೈತರಿಗೆ ಬಿತ್ತನೆ ಬೀಜಗಳ ವಿತರಿಸುವ ಕಾರ್ಯಕ್ರಮ ಪ್ರಾರಂಭ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದರು.

ಸಹಕಾರ ಸಂಘದ ಧ್ವಜಾರೋಹಣ ನೆರೆವೇರಿಸಿ, ಸಹಕಾರ ಸಂಘದ ಪಿತಾಮಹ ಸಿದ್ಧನಗೌಡ ಪಾಟೀಲ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು.

ಜಿಲ್ಲಾ ಸಹಕಾರ ಸಂಘದ ಅಧ್ಯಕ್ಷ ಶಂಕರಪ್ಪ ರಾಯನಾಳ ಅಧ್ಯಕ್ಷತೆ ವಹಿಸಿದ್ದರು. ಬಿಜೆಪಿ ಗ್ರಾಮಾಂತರ ಜಿಲ್ಲಾಧ್ಯಕ್ಷ ನಿಂಗಪ್ಪ ಸುತಗಟ್ಟಿ, ಉಮೇಶ ಹೇಬಸೂರ, ಕೆಎಂಎಫ್ ನಿರ್ದೇಶಕಿ ಗೀತಾ ಮರಲಿಂಗಣ್ಣವರ, ಎಸ್.ವಿ. ತಡಸಮಠ, ಸಹಕಾರ ಸಂಘಗಳ ಸಿಇಒ ಸವಿತಾ ಕರ್ಲಗೇರಿ, ಕೆಸಿಸಿ ಬ್ಯಾಂಕಿನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುನೀತಾ ಸಿದ್ಧರಾಮ, ಎಸ್.ಆರ್. ಪಾಟೀಲ, ಎಸ್.ವಿ. ತಡಸಮಠ ಮಾತನಾಡಿದರು.

ಹರಿಶಂಕರ ಮಠದ, ನರೇಶ ಮಲೆನಾಡು, ಗಂಗಾಧರ್ ಚಿಕ್ಕಮಠ, ಬಿ.ವೈ. ಪಾಟೀಲ್, ಉಳವಪ್ಪ ಬಳಿಗೇರ, ಬಿ.ಐ. ದೇಸಾಯಿ, ನಿಜಲಿಂಗಪ್ಪ ಹುಲಮನಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.