ADVERTISEMENT

ಹುಬ್ಬಳ್ಳಿ-ಧಾರವಾಡದಲ್ಲಿ 172 ರೌಡಿಗಳ ಮನೆಮೇಲೆ ದಿಢೀರ್ ಪೊಲೀಸ್ ದಾಳಿ

ಹು-ಧಾ ಮಹಾನಗರ ಪೊಲೀಸರು ಮಂಗಳವಾರ 172 ರೌಡಿಗಳ ಮನೆ ಮೇಲೆ ದಿಢೀರ್ ದಾಳಿ ನಡೆಸಿದ್ದಾರೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 22 ನವೆಂಬರ್ 2023, 13:47 IST
Last Updated 22 ನವೆಂಬರ್ 2023, 13:47 IST
<div class="paragraphs"><p>ಹು-ಧಾ ಮಹಾನಗರ ಪೊಲೀಸರು ಮಂಗಳವಾರ 172 ರೌಡಿಗಳ ಮನೆ ಮೇಲೆ ದಿಢೀರ್ ದಾಳಿ ನಡೆಸಿದ್ದಾರೆ</p></div>

ಹು-ಧಾ ಮಹಾನಗರ ಪೊಲೀಸರು ಮಂಗಳವಾರ 172 ರೌಡಿಗಳ ಮನೆ ಮೇಲೆ ದಿಢೀರ್ ದಾಳಿ ನಡೆಸಿದ್ದಾರೆ

   

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡದಲ್ಲಿ ನಡೆಯುತ್ತಿರುವ ಅಪರಾಧಕೃತ್ಯಗಳನ್ನು ನಿಯಂತ್ರಿಸುವ ಹಿನ್ನೆಲೆಯಲ್ಲಿ ಹು-ಧಾ ಮಹಾನಗರ ಪೊಲೀಸರು ಮಂಗಳವಾರ 172 ರೌಡಿಗಳ ಮನೆ ಮೇಲೆ ದಿಢೀರ್ ದಾಳಿ ನಡೆಸಿದ್ದಾರೆ.

ಕಮಿಷನರ್ ರೇಣುಕಾ ಸುಕುಮಾರ, ಡಿಸಿಪಿ ರಾಜೀವ ಎಂ. ಮಾರ್ಗದರ್ಶನದಲ್ಲಿ ಉತ್ತರ, ದಕ್ಷಿಣ ಮತ್ತು ಧಾರವಾಡ ವಿಭಾಗದ ಎಸಿಪಿ, ಇನ್ಸ್ಪೆಕ್ಟರ್ ನೇತೃತ್ವದಲ್ಲಿ ಎಲ್ಲ ಠಾಣೆಗಳ ವ್ಯಾಪ್ತಿಯಲ್ಲಿನ ರೌಡಿಗಳ ಮನೆ ಮೇಲೆ ಏಕಕಾಲದಲ್ಲಿ ದಾಳಿ ನಡೆಸಲಾಗಿದೆ. ಕೆಲವು ರೌಡಿಗಳಿಗೆ ಅಪರಾಧ ಕೃತ್ಯಗಳಲ್ಲಿ ತೊಡಗದಂತೆ ಎಚ್ಚರಿಕೆ ನೀಡಿ, ಮುಚ್ಚಳಿಕೆ ಬರೆಸಿಕೊಳ್ಳಲಾಗಿದೆ. ಕೆಲವರ ವಿರುದ್ಧ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ.

ADVERTISEMENT

ಪರಿಶೀಲನೆ ಸಂದರ್ಭ ಬೆಂಡಿಗೇರಿ ಪೊಲೀಸ್ ಠಾಣೆಯ ರೌಡಿ ಪಟ್ಟಿಯಲ್ಲಿದ್ದ ಷಣ್ಮುಖ ಗುಡಿಹಾಳ ಮನೆಯಲ್ಲಿ ಮಾರಕಾಸ್ತ್ರಗಳು ದೊರೆತಿದ್ದು, ಅಕ್ರಮ ಶಸ್ತ್ರಾಸ್ತ್ರ ಸಂಗ್ರಹ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಐದು ರೌಡಿಗಳ ವಿರುದ್ಧ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಹಾಗೂ ವಿವಿಧ ಅಪರಾಧ ಪ್ರಕರಣಗಳಲ್ಲಿ ಬಾಡಿ ವಾರಂಟ್ ಜಾರಿಯಾಗಿದ್ದರೂ ತಲೆಮರೆಸಿಕೊಂಡಿದ್ದ ಮೂವರು ರೌಡಿಗಳನ್ನು ವಶಕ್ಕೆ ಪಡೆದು ನ್ಯಾಯಾಂಗಕ್ಕೆ ಹಾಜರು ಪಡಿಸಲಾಗಿದೆ.

'ನಗರದಲ್ಲಿ ರೌಡಿಸಂ, ಪುಂಡಾಟ ಹಾಗೂ ಯಾವುದೇ ಕಾನೂನು ಬಾಹಿರ ಚಟುವಟಿಕೆಗಳಿಗೆ ಅವಕಾಶವಿಲ್ಲ. ಅಂತಹ ಚಟುವಟಿಕೆಗಳು ಕಂಡುಬಂದರೆ, ಮುಲಾಜಿಲ್ಲದೆ ಕಠಿಣಕ್ರಮ ಕೈಗೊಳ್ಳಲಾಗುವುದು' ಎಂದು ಪೊಲೀಸ್ ಕಮಿಷನರ್ ರೇಣುಕಾ ಸುಕುಮಾರ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.