ADVERTISEMENT

ಧಾರವಾಡ: ತಾಲ್ಲೂಕು ಸಾಹಿತ್ಯ ಸಮ್ಮೇಳನಕ್ಕೆ ಮೆರವಣಿಗೆ ಮೆರಗು

​ಪ್ರಜಾವಾಣಿ ವಾರ್ತೆ
Published 30 ಜನವರಿ 2023, 4:28 IST
Last Updated 30 ಜನವರಿ 2023, 4:28 IST
ಧಾರವಾಡ ತಾಲ್ಲೂಕಿನ ಮುಮ್ಮಿಗಟ್ಟಿ ಗ್ರಾಮದಲ್ಲಿ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷೆ ಲೀಲಾ ಕಲಕೋಟಿ ಮೆರವಣಿಗೆ ನಡೆಯಿತು. ಮಹಿಳೆ ಟ್ರ್ಯಾಕ್ಟರ್ ನಡೆಸುವ ಮೂಲಕ ಗಮನ ಸೆಳೆದರು.
ಧಾರವಾಡ ತಾಲ್ಲೂಕಿನ ಮುಮ್ಮಿಗಟ್ಟಿ ಗ್ರಾಮದಲ್ಲಿ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷೆ ಲೀಲಾ ಕಲಕೋಟಿ ಮೆರವಣಿಗೆ ನಡೆಯಿತು. ಮಹಿಳೆ ಟ್ರ್ಯಾಕ್ಟರ್ ನಡೆಸುವ ಮೂಲಕ ಗಮನ ಸೆಳೆದರು.   

ಧಾರವಾಡ: ತಾಲ್ಲೂಕಿನ ಮುಗ್ಗಿಗಟ್ಟಿ ಗ್ರಾಮದಲ್ಲಿ ನಡೆದ ಧಾರವಾಡ ತಾಲ್ಲೂಕು 9ನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರ ಮೆರವಣಿಗೆಗೆ ಗ್ರಾಮೀಣ ಕ್ಷೇತ್ರ ಶಿಕ್ಷಣಾಧಿಕಾರಿ ಉಮೇಶ ಬೊಮ್ಮಕ್ಕನವರ ಭಾನುವಾರ ಚಾಲನೆ ನೀಡಿದರು.

ಪುಷ್ಪಾಲಂಕಾರದಿಂದ ಕಂಗೊಳಿಸುತ್ತಿದ್ದ ರಥದಲ್ಲಿ ಸಮ್ಮೇಳನಾಧ್ಯಕ್ಷೆ ಲೀಲಾ ಕಲಕೋಟಿ ಅವರ ಮೆರವಣಿಗೆ ಗ್ರಾಮದ ವಿವಿಧ ಬೀದಿಗಳಲ್ಲಿ ಸಂಚರಿಸಿತು. ಅಲ್ಲಿ ನೆರೆದ ನೂರಾರು ಕನ್ನಡಾಭಿಮಾನಿಗಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು, ಸಾಹಿತಿಗಳು ಹಾಗೂ ಗ್ರಾಮಸ್ಥರು ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದರು. ಮೆರವಣಿಗೆಯುದ್ದಕ್ಕೂ ಕನ್ನಡಾಂಬೆಗೆ ಜೈಕಾರ ಮೊಳಗಿಸಿದರು.

ಮೆರವಣಿಗೆಯಲ್ಲಿ ಕುಂಭಮೇಳ, ಕರಡಿ ಮಜಲು, ಡೊಳ್ಳು ಕುಣಿತ, ಶಾಲಾ ಮಕ್ಕಳ ಲೇಝಿಮ್ ತಂಡ ಸೇರಿದಂತೆ ಹಲವು ಕಲಾಮೇಳಗಳು ಸಮ್ಮೇಳನಕ್ಕೆ ಮೆರಗು ನೀಡಿದವು. ನೋಡಿದೆಲ್ಲಡೆ ಕನ್ನಡ ಧ್ವಜಗಳು ರಾರಾಜಿಸಿದವು. ಮಹಾತ್ಮರ ವೇಷಭೂಣ ಧರಿಸಿದ್ದ ಮಕ್ಕಳು ಗಮನ ಸೆಳೆದರು. ಒಟ್ಟಿನಲ್ಲಿ ಗ್ರಾಮದ ತುಂಬ ನಾಡು-ನುಡಿ ಝೇಂಕಾರ ಅನುರಣಿಸಿತು.

ADVERTISEMENT

ಇದಕ್ಕೂ ಮೊದಲು ಮುಮ್ಮಿಗಟ್ಟಿ ಸರ್ಕಾರಿ ಶಾಲೆ ಆವರಣದಲ್ಲಿ ಗ್ರಾಮ ಪಂಚಾಯ್ತಿ ಅಧ್ಯಕ್ಷ ವಿಠಲ ಭಟ್ಟಂಗಿ ರಾಷ್ಟ್ರಧ್ವಜ, ಕಸಪಾ ಜಿಲ್ಲಾಧ್ಯಕ್ಷ ಡಾ. ಲಿಂಗರಾಜ ಅಂಗಡಿ ನಾಡಧ್ವಜ, ಧಾರವಾಡ ತಾಲೂಕಾಧ್ಯಕ್ಷೆ ಡಾ.ಶರಣಮ್ಮ ಗೋರೆಬಾಳ ಪರಿಷತ್ ಧ್ವಜಾರೋಹಣ ನೆರವೇರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.