ADVERTISEMENT

ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದ ಶಾಸಕ ಟೆಂಗಿನಕಾಯಿ

​ಪ್ರಜಾವಾಣಿ ವಾರ್ತೆ
Published 26 ಜೂನ್ 2024, 15:37 IST
Last Updated 26 ಜೂನ್ 2024, 15:37 IST
ಮಹೇಶ ಟೆಂಗಿನಕಾಯಿ
ಮಹೇಶ ಟೆಂಗಿನಕಾಯಿ    

ಹುಬ್ಬಳ್ಳಿ: ಪೆಟ್ರೋಲ್, ಡೀಸೆಲ್ ದರ ಏರಿಸಿದ್ದ ರಾಜ್ಯ ಸರ್ಕಾರ, ಈಗ ಮಕ್ಕಳು ಕುಡಿಯುವ ಹಾಲನ್ನು ಬಿಟ್ಟಿಲ್ಲ. ಕಾಂಗ್ರೆಸ್‌ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದು ಒಂದೇ ವರ್ಷದಲ್ಲಿ ರಾಜ್ಯವನ್ನು ದಿವಾಳಿ ಮಾಡಿದೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ವಾಗ್ದಾಳಿ ನಡೆಸಿದರು.

ನಗರದಲ್ಲಿ ಬುಧವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಉಚಿತ ಗ್ಯಾರಂಟಿ ನೀಡುವುದಾಗಿ ಹೇಳಿಕೊಂಡು ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಆದರೆ ಗ್ಯಾರಂಟಿ ನಿರ್ವಹಣೆಗಾಗಿ ಈಗ ಎಲ್ಲ ಅಗತ್ಯ ವಸ್ತುಗಳ ಬೆಲೆಗಳ ಏರಿಕೆ ಮಾಡುತ್ತಿದೆ. ಪೆಟ್ರೋಲ್‌, ಡಿಸೇಲ್ ಆಯಿತು, ಈಗ ಹಾಲಿನ ದರ ಏರಿಕೆ ಮಾಡಿದ್ದಾರೆ’ ಎಂದು ಟೀಕಿಸಿದರು.

‘ರಾಜ್ಯ ಸರ್ಕಾರ ಈ ಹಿಂದೆ ಬಸ್ ಪ್ರಯಾಣ ದರ, ಆಸ್ತಿ ನೋಂದಣಿ ಶುಲ್ಕ, ವಿದ್ಯುತ್ ದರ, ಮದ್ಯದ ದರ ಹೆಚ್ಚಿಸಿತ್ತು. ಕಳೆದೊಂದು ವರ್ಷದಿಂದ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ ಎನ್ನುವುದು ಸ್ಪಷ್ಟ. ಚುನಾವಣೆಗೋಸ್ಕರ ಗ್ಯಾರಂಟಿ ಯೋಜನೆಗಳನ್ನು ಮಾಡಿರುವುದಾಗಿ ಅವರ ಪಕ್ಷದವರೇ ಹೇಳಿದ್ದಾರೆ. ಚುನಾವಣೆಯಲ್ಲಿ ಗ್ಯಾರಂಟಿ ಯೋಜನೆಗಳು ಕೈ ಹಿಡಿಯಲಿಲ್ಲ ಎಂದು ಅವರೇ ಹೇಳಿದ್ದಾರೆ. ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ  ದುಡ್ಡಿಲ್ಲದಿರುವುದು ಖೇದಕರ ಸಂಗತಿ’ ಎಂದು ಅಸಮಾಧಾನ ಹೊರಹಾಕಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.