ಕಲಘಟಗಿ: ಧಾರವಾಡ ಜಿಲ್ಲಾ ಗ್ರಾಮೀಣ ಛಾಯಾಚಿತ್ರ ಗ್ರಾಹಕರ ಸಂಘದ ಅಧ್ಯಕ್ಷರಾಗಿ ಪ್ರಭಯ್ಯ ಲಕ್ಕುಂಡಿ ಮಠ, ಉಪಾಧ್ಯಕ್ಷರಾಗಿ ಗುರುನಾಥ ಕುಂಬಾರ ಹಾಗೂ ಕಾರ್ಯದರ್ಶಿ ರವೀಂದ್ರ ಅಂಗಡಿ ಅವಿರೋಧ ಆಯ್ಕೆಯಾಗಿದರು.
ಪಟ್ಟಣದ ಹನ್ನೆರಡು ಮಠದಲ್ಲಿ ಈಚೆಗೆ ಜರುಗಿದ ಪದಾಧಿಕಾರಿಗಳ ಸಭೆಯಲ್ಲಿ ಆಯ್ಕೆ ಮಾಡಲಾಯಿತು.
ಕೆಪಿಎ ನಿರ್ದೇಶಕ ಲಕ್ಷ್ಮೀನಾರಾಯಣ ಭಟ್ಟ ಹಾಗೂ ಹನ್ನೆರಡು ಮಠದ ರೇವಣಸಿದ್ಧ ಶಿವಾಚಾರ್ಯ ನೇತೃತ್ವದಲ್ಲಿ ಆಯ್ಕೆ ಮಾಡಲಾಗಿದೆ ಎಂದು ತಾಲ್ಲೂಕ ಛಾಯಾಗ್ರಾಹಕರ ಸಂಘದ ಪ್ರದಾನ ಕಾರ್ಯದರ್ಶಿ ಶಿವಕುಮಾರ ನೂಲ್ವಿ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.