ADVERTISEMENT

ವಾಂತಿಭೇದಿ ಪ್ರಕರಣ: 22 ಮಂದಿ ಚೇತರಿಕೆ; ಆಸ್ಪತ್ರೆಯಿಂದ ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 26 ಅಕ್ಟೋಬರ್ 2024, 16:06 IST
Last Updated 26 ಅಕ್ಟೋಬರ್ 2024, 16:06 IST
ಕಲಘಟಗಿ ತಾಲ್ಲೂಕಿನ ಮುತ್ತಗಿ ಗ್ರಾಮದಲ್ಲಿ ಆರೋಗ್ಯ ಸಿಬ್ಭಂದಿ ಶುಕ್ರವಾರ ಆರೋಗ್ಯ ಸಮೀಕ್ಷೆ ನಡೆಸಿದರು. ಜಿಲ್ಲಾ ಆರೋಗ್ಯಾಧಿಕಾರಿ ಶಶಿ ಪಾಟೀಲ ಪಾಲ್ಗೊಂಡಿದ್ದರು.
ಕಲಘಟಗಿ ತಾಲ್ಲೂಕಿನ ಮುತ್ತಗಿ ಗ್ರಾಮದಲ್ಲಿ ಆರೋಗ್ಯ ಸಿಬ್ಭಂದಿ ಶುಕ್ರವಾರ ಆರೋಗ್ಯ ಸಮೀಕ್ಷೆ ನಡೆಸಿದರು. ಜಿಲ್ಲಾ ಆರೋಗ್ಯಾಧಿಕಾರಿ ಶಶಿ ಪಾಟೀಲ ಪಾಲ್ಗೊಂಡಿದ್ದರು.    

ಧಾರವಾಡ: ಕಲಘಟಗಿ ತಾಲ್ಲೂಕಿನ ಮುತ್ತಗಿ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ವಾಂತಿಭೇದಿಯಾಗಿ ಚಿಕಿತ್ಸೆಗೆ ದಾಖಲಾಗಿದ್ದವರಲ್ಲಿ 22 ಮಂದಿ ಚೇತರಿಸಿಕೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, 38 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ತಿಳಿಸಿದ್ಧಾರೆ.

ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ 13 ಮಂದಿ ದಾಖಲಿಸಲಾಗಿದೆ. ಕಲಘಟಗಿ ತಾಲ್ಲೂಕು ಆಸ್ಪತ್ರೆಯಲ್ಲಿ 38 ಮಂದಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಎಲ್ಲರೂ ಗುಣಮುಖರಾಗುತ್ತಿದ್ಧಾರೆ ಎಂದು ತಿಳಿಸಿದ್ಧಾರೆ.

ಗ್ರಾಮಕ್ಕೆ ಟ್ಯಾಂಕರ್‌ನಲ್ಲಿ ಶುದ್ಧ ಕುಡಿಯುವ ನೀರು ಪೂರೈಕೆಗೆ ಕ್ರಮ ವಹಿಸಲಾಗಿದೆ. ಗ್ರಾಮಕ್ಕೆ ವೈದ್ಯರು, ಆರೋಗ್ಯ ಸಿಬ್ಬಂದಿ ತಂಡವನ್ನು ನಿಯೋಜಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ಧಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.