ADVERTISEMENT

ವಕ್ಫ್‌ ಕಾನೂನು ಬದಲಾವಣೆ: ಪ್ರಲ್ಹಾದ ಜೋಶಿ

​ಪ್ರಜಾವಾಣಿ ವಾರ್ತೆ
Published 29 ಅಕ್ಟೋಬರ್ 2024, 16:36 IST
Last Updated 29 ಅಕ್ಟೋಬರ್ 2024, 16:36 IST
ಪ್ರಲ್ಹಾದ ಜೋಶಿ
ಪ್ರಲ್ಹಾದ ಜೋಶಿ   

ಧಾರವಾಡ: ‘ದೇಶದಲ್ಲಿ ವಕ್ಫ್‌ ಕಾನೂನು ಮಾಡಿದ್ದು ತಪ್ಪು. ಕೇಂದ್ರ ಸರ್ಕಾರವು ವಕ್ಫ್‌ ಕಾನೂನಿನಲ್ಲಿ ಅನೇಕ ಬದಲಾವಣೆ ತರಲು ಮುಂದಾಗಿದೆ. ಈ ಕಾನೂನನ್ನು ತೆಗೆದುಹಾಕುವುದು ಸೂಕ್ತ’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಿಳಿಸಿದರು.

‘ದೇಶದ ಯಾವ ವಿಭಾಗಗಳಿಗೂ ಇರದ ಅಧಿಕಾರವನ್ನು 2013ರಲ್ಲಿ ವಕ್ಫ್‌ ಮಂಡಳಿಗೆ ನೀಡಲಾಗಿದೆ. ಮಂಡಳಿಯ ಅಧಿಸೂಚನೆಯನ್ನು ವಿಚಾರಣೆ ನಡೆಸುವ ಅಧಿಕಾರ ಸುಪ್ರೀಂ ಕೋರ್ಟ್‌ಗೂ ಇಲ್ಲ ಎಂದು ಮಂಡಳಿಯವರು ಹೇಳಿದ್ದಾರೆ’ ಎಂದು ಅವರು ಮಂಗಳವಾರ ಸುದ್ದಿಗಾರರಿಗೆ ತಿಳಿಸಿದರು.

‘ಕಾಂಗ್ರೆಸ್‌ ಮುಸ್ಲಿಂ ತುಷ್ಟೀಕರಣದಲ್ಲಿ ತೊಡಗಿದೆ. ವಕ್ಫ್‌ ಆಸ್ತಿ ನೋಟಿಸ್‌ ಹಿಂದೆ ಕಾಂಗ್ರೆಸ್‌ ಸರ್ಕಾರ ಮತ್ತು ಸಚಿವ ಜಮೀರ್‌ ಅಹಮದ್‌ ಖಾನ್‌ ಕುಮ್ಮಕ್ಕು ಇದೆ. ವಕ್ಫ್‌ ಆಸ್ತಿ ಎಂದು ರೈತರಿಗೆ ನೋಟಿಸ್‌ ನೀಡಿದ ತಹಶೀಲ್ದಾರ್ ಅಮಾನತಿಗೆ ವಿಜಯಪುರ ಜಿಲ್ಲಾಧಿಕಾರಿ ಕ್ರಮ ವಹಿಸಬೇಕು. ಪ್ರಕರಣ ದಾಖಲಿಸಬೇಕು’ ಎಂದು ಅವರು ಒತ್ತಾಯಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.