ಹುಬ್ಬಳ್ಳಿ: ಈ ಬಜೆಟ್‌ನಲ್ಲಿ ಸಹಕಾರ ಬ್ಯಾಂಕ್‌ಗಳಲ್ಲಿನ ರೈತರ ಸಾಲ ಬಡ್ಡಿ ಹಾಗೂ ಸುಸ್ಥಿ ಸಾಲದ ಬಡ್ಡಿ ಮನ್ನಾ ಮಾಡಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು.
ಇಂದು ಹುಬ್ಬಳ್ಳಿಗೆ ಭೇಟಿ ನೀಡಿರುವ ಅವರು, ‘ಮಾರ್ಚ್ ೫ ರಂದು ಬಜೆಟ್ ಮಂಡನೆಯಾಗಲಿದೆ. ಈಗಾಗಲೇ ಸಿದ್ದತೆ ನಡೆಯುತ್ತಿದೆ. ಬಜೆಟ್ ನಲ್ಲಿ ಸಹಕಾರ ಬ್ಯಾಂಕಗಳ ರೈತರ ಬಡ್ಡಿ ಹಾಗೂ ಸುಸ್ತಿಬಡ್ಡಿ ಮನ್ನಾ ಮಾಡಲಾಗುವುದು. ಬಡ್ಡಿ ಮನ್ನಾದಿಂದ ₹400 ಕೋಟಿ ರೂಪಾಯಿಗೂ ಅಧಿಕ ಹೊರೆಯಾಗಲಿದೆ‘ ಎಂದು ತಿಳಿಸಿದರು.
ಮಹದಾಯಿ ವಿಚಾರವಾಗಿ ಕೆಲ ದಿನಗಳಲ್ಲಿ ದೆಹಲಿಗೆ ಹೋಗಿ ಮಾತನಾಡುತ್ತೇನೆ. ಆ ಬಗ್ಗೆ ಮೇಲ್ಮನವಿ ಸಲ್ಲಿಸುವ ಬಗ್ಗೆ ಸಿದ್ದತೆ ನಡೆಯುತ್ತಿದೆ ಎಂದು ಬಿಎಸ್‌ವೈ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.