ಧಾರವಾಡ: ಯುವಜನೋತ್ಸವದಲ್ಲಿ ವಿದ್ಯಾರ್ಥಿಗಳು ಉತ್ಸಾಹದಿಂದ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರತಿಭೆ ಪ್ರದರ್ಶಿಸಿದರು.
ಕೇಂದ್ರ ಯುವ ವ್ಯವಹಾರಗಳ ಮತ್ತು ಕ್ರೀಡಾ ಸಚಿವಾಲಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರೂ ಯುವಕ ಕೇಂದ್ರ, ಕರ್ನಾಟಕ ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಕೋಶ ಮತ್ತು ಜೆಎಸ್ಎಸ್ ಮಹಾವಿದ್ಯಾಲಯ ವತಿಯಿಂದ ಸನ್ನಿಧಿ ಕಲಾಕ್ಷೇತ್ರದಲ್ಲಿ ಮಂಗಳವಾರ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಯುವಜನೋತ್ಸದಲ್ಲಿ ಜನಪದ ನೃತ್ಯ, ಜನಪದ ಗೀತೆ ಗಾಯನ, ಚಿತ್ರಕಲೆ ಸಹಿತ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಭಾರತ ಸಂವಿಧಾನ ಪೀಠಿಕೆಯನ್ನು ಓದಿಸಲಾಯಿತು. ಜನತಾ ಶಿಕ್ಷಣ ಸಮಿತಿ ಕಾರ್ಯದರ್ಶಿ ಅಜಿತಪ್ರಸಾದ್ ಅವರು ಉದ್ಘಾಟನೆ ನೆರವೇರಿಸಿದರು. ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಾಕಿರ್ ಸನದಿ, ನೆಹರು ಯುವಕ ಕೇಂದ್ರ ಅಧಿಕಾರಿ ಎಂ ಗೌತಮ್ ರೆಡ್ಡಿ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.