ADVERTISEMENT

ಸಾರಿಗೆ ಬಸ್-ಲಾರಿ ನಡುವೆ ಭೀಕರ ಅಪಘಾತ

​ಪ್ರಜಾವಾಣಿ ವಾರ್ತೆ
Published 24 ಜನವರಿ 2024, 15:48 IST
Last Updated 24 ಜನವರಿ 2024, 15:48 IST
ಡಂಬಳ ಹೋಬಳಿ ಹಳ್ಳಿಕೇರಿ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ ಬಳಿ ಬುಧವಾರ ಸಾರಿಗೆ ಬಸ್ ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಬಸ್ ನುಚ್ಚುನುರಾಗಿದ್ದು ಸ್ಥಳಕ್ಕೆ ಮುಂಡರಗಿ ಪೊಲೀಸ್‍ಠಾಣೆಯ ಸಿಪಿಐ ಮಂಜುನಾಥ ಕುಸಗಲ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಡಂಬಳ ಹೋಬಳಿ ಹಳ್ಳಿಕೇರಿ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ ಬಳಿ ಬುಧವಾರ ಸಾರಿಗೆ ಬಸ್ ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಬಸ್ ನುಚ್ಚುನುರಾಗಿದ್ದು ಸ್ಥಳಕ್ಕೆ ಮುಂಡರಗಿ ಪೊಲೀಸ್‍ಠಾಣೆಯ ಸಿಪಿಐ ಮಂಜುನಾಥ ಕುಸಗಲ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.   

ಡಂಬಳ: ಹೋಬಳಿ ವ್ಯಾಪ್ತಿಯ ಹಳ್ಳಿಕೇರಿ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ ಬಳಿಯಲ್ಲಿ ಸಾರಿಗೆ ಬಸ್ ಮತ್ತು ಲಾರಿ ನಡುವೆ ಬುಧವಾರ ಭೀಕರ ಅಪಘಾತ ಸಂಭವಿಸಿದ್ದು ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೆ ಮೃತಪಟ್ಟಿದ್ದು ಒಬ್ಬರ ಸ್ಥಿತಿ ಗಂಭೀರವಾಗಿದ್ದು ಸಾರಿಗೆ ಬಸಲ್ಲಿ ಪ್ರಯಾಣ ಮಾಡುತ್ತಿದ್ದ ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ.

ಕೊಪ್ಪಳದಿಂದ ಗದಗ ಮಾರ್ಗವಾಗಿ ಸವದತ್ತಿ ಯಲ್ಲಮ್ಮ ಗುಡ್ಡಕ್ಕೆ ಹೋಗುತ್ತಿದ್ದ ಕೊಪ್ಪಳ ಭಾಗ್ಯನಗರದ ಗೀತಾ ಯಲ್ಲಪ್ಪ ಕಲಾಲ(38) ಮತ್ತು ತಮಿಳುನಾಡು ರಾಜ್ಯದ ಸೇಲಂ ಜಿಲ್ಲೆಯ ಲಾರಿ ಚಾಲಕ ರಾಮಕೃಷ್ಠ(28) ಸ್ಥಳದಲ್ಲೆ ಮೃತಪಟ್ಟಿದ್ದಾರೆ. ಲಾರಿ ಗೋವಾದಿಂದ ಹೈದ್ರಾಬಾದ್‌ಗೆ ಹೋಗುತ್ತಿತ್ತು ಎಂದು ತಿಳಿದು ಬಂದಿದೆ.

ಕೊಪ್ಪಳ ಜಿಲ್ಲೆಯ ಭಾಗ್ಯನಗರದ ಪರಸಪ್ಪ ಕಲಾಲ, ಲಕ್ಷ್ಮೀ ನಾಗಪ್ಪ ಕಲಾಲ, ಹಳ್ಳಿಕೇರಿ ಗ್ರಾಮದ ಧನಂಜಯ ದೊಡ್ಡಗಾಳೆಪ್ಪ ಪೂಜಾರ ಮತ್ತು ಲಾರಿ ಕಿನ್ನರ ಚಾಮರಾಜನಗರದ ಕೊಳ್ಳೆಗಾಲದ ವಿನೋದಕುಮಾರ ಗಂಭೀರವಾಗಿ ಗಾಯಗೊಂಡಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಗದಗ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್‍ಲ್ಲಿ ಪ್ರಯಾಣ ಮಾಡುತ್ತಿದ್ದ ಸುಮಾರು 15ಕ್ಕೂ ಹೆಚ್ಚು ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ADVERTISEMENT

ಸಾರಿಗೆ ಬಸ್ ಮತ್ತು ಲಾರಿ ನಡುವೆ ಭೀಕರ ಅಪಘಾತದಿಂದ ಕೆಲಹುತ್ತು ಸಂಚಾರದಲ್ಲಿ ವ್ಯತ್ಯಯ ಉಂಟಾಯಿತು. ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಹಳ್ಳಿಕೇರಿ ಹಳ್ಳಿಗುಡಿ ಸೇರಿದಂತೆ ಸುತ್ತಮುತ್ತಲೀನ ಗ್ರಾಮಸ್ಥರು ತಂಡೋಪ ತಂಡವಾಗಿ ಆಗಮಿಸಿ ಅಪಘಾತದ ಭೀಕರತೆ ಚಿತ್ರಣ ನೋಡಿದ ಸಾರ್ವಜನಿಕರು ಮರಗಿದರು.

ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್.ನೇಮಗೌಡ, ಹೆಚ್ಚುವರಿ ಪೊಲೀಸ್‍ವರಿಷ್ಠಾಧಿಕಾರಿ ಎಂ.ಬಿ.ಸಂಕದ. ನರಗುಂದ ಉಪವಿಭಾಗದ ಡಿವೈಎಸ್‍ಪಿ ಪ್ರಭುಗೌಡ ಕೆ. ಮುಂಡರಗಿ ಸಿಪಿಐ ಮಂಜುನಾಥ ಕುಸಗಲ್ ಡಂಬಳ ಪೊಲೀಸ್ ಹೊರಠಾಣೆಯ ಎ.ಎಸ್.ಐ ವೀರಭದ್ರಪ್ಪ ತಂಟ್ರೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಕುರಿತು ಮುಂಡರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.