ನರಗುಂದ (ಗದಗ ಜಿಲ್ಲೆ): ಲಾರಿ ಹಾಗೂ ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ಕಾರಿನಲ್ಲಿದ್ದ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಮಕ್ಕಳಿಗೆ ಗಾಯವಾದ ಘಟನೆ ತಾಲ್ಲೂಕಿನ ಭೈರನಹಟ್ಟಿ ಗ್ರಾಮದ ಬಳಿ ಬುಧವಾರ ನಡೆದಿದೆ.
ಬಾಗಲಕೋಟೆಯ ಸಿದ್ದರಾಮ ಹಾಗೂ ಹೇಮಾ ಮೃತಪಟ್ಟವರು. ಮಕ್ಕಳಾದ ಮಲ್ಲಿಕಾರ್ಜುನ ಹಾಗೂ ಸಹನಾಗೆ ಗಾಯಗಳಾಗಿದ್ದಿ, ಅವರನ್ನು ನರಗುಂದ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.
ಹುಬ್ಬಳ್ಳಿ-ವಿಜಯಪುರ ರಾಷ್ಟ್ರೀಯ ಹೆದ್ದಾರಿ 218ರಲ್ಲಿ ಬುಧವಾರ ಬೆಳಿಗ್ಗೆ ಅಪಘಾತ ನಡೆದಿದೆ.
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಿಂದ ಪೂಜೆ ಮುಗಿಸಿಕೊಂಡು ಮರಳಿ ಊರಿಗೆ ಬರುತ್ತಿದ್ದಾಗ ದಾರಿ ಮಧ್ಯೆ ಈ ದುರ್ಘಟನೆ ನಡೆದಿದೆ. ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.
ಸ್ಥಳಕ್ಕೆ ನರಗುಂದ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.