ADVERTISEMENT

ಕ್ರೀಡಾಪ್ರದರ್ಶನಕ್ಕೆ ಉತ್ತಮ ವೇದಿಕೆ: ಶಾಸಕ ಸಿ.ಸಿ. ಪಾಟೀಲ

​ಪ್ರಜಾವಾಣಿ ವಾರ್ತೆ
Published 20 ಸೆಪ್ಟೆಂಬರ್ 2024, 16:14 IST
Last Updated 20 ಸೆಪ್ಟೆಂಬರ್ 2024, 16:14 IST
ನರಗುಂದದ ತಾಲ್ಲೂಕು ಕ್ರೀಡಾಂಗಣದಲ್ಲಿ ನಡೆದ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟಕ್ಕೆ ಶಾಸಕ ಸಿ.ಸಿ.ಪಾಟೀಲ ಕ್ರೀಡಾಧ್ವಜಾರೋಹಣ ನೆರವೇರಿಸಿ ಚಾಲನೆ ನೀಡಿದರು
ನರಗುಂದದ ತಾಲ್ಲೂಕು ಕ್ರೀಡಾಂಗಣದಲ್ಲಿ ನಡೆದ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟಕ್ಕೆ ಶಾಸಕ ಸಿ.ಸಿ.ಪಾಟೀಲ ಕ್ರೀಡಾಧ್ವಜಾರೋಹಣ ನೆರವೇರಿಸಿ ಚಾಲನೆ ನೀಡಿದರು   

ನರಗುಂದ: ‘ಕ್ರೀಡೆ ಜೀವನದಲ್ಲಿ ಬಹುಮುಖ್ಯ ಪಾತ್ರ ವಹಿಸುತ್ತದೆ. ದೈಹಿಕವಾಗಿ ಸದೃಢ ವ್ಯಕ್ತಿಯನ್ನಾಗಿ ಮಾಡುತ್ತದೆ. ದಸರಾ ಕ್ರೀಡಾಕೂಟವು ಕ್ರೀಡಾಪ್ರದರ್ಶನಕ್ಕೆ ಉತ್ತಮ ವೇದಿಕೆಯಾಗಿದೆ’ ಎಂದು ಶಾಸಕ ಸಿ.ಸಿ. ಪಾಟೀಲ ಹೇಳಿದರು.

ಪಟ್ಟಣದ ತಾಲ್ಲೂಕು ಕ್ರೀಡಾಂಗಣದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಮತ್ತು ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಶುಕ್ರವಾರ ನಡೆದ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟಕ್ಕೆ ಚಾಲನೆ ಮಾತನಾಡಿದರು.

‘ಭಾರತ ದೇಶ ಹೆಚ್ಚು ಯುವ ಸಮುದಾಯ ಹೊಂದಿದ ರಾಷ್ಟ್ರವಾಗಿದೆ. ಆದರೆ ನಮ್ಮ ದೇಶದ ಯುವ ಕ್ರೀಡಾಪಟುಗಳು ಅಂತರರಾಷ್ಟ್ರೀಯ ಮಟ್ಟದಲ್ಲಿ ಇನ್ನೂ ಹೆಚ್ಚಿನ ಸಾಧನೆ ಮಾಡಬೇಕಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಯುವ ಕ್ರೀಡಾಪಟುಗಳಿಗೆ, ವಿದ್ಯಾರ್ಥಿಗಳಿಗೆ ಕ್ರೀಡೆಯಲ್ಲಿ ಸಾಧನೆ ಮಾಡಲು ಸಾಕಷ್ಟು ಹಣ ಖರ್ಚು ಮಾಡುತ್ತಿದೆ. ಸರ್ಕಾರದ ಸೌಲಭ್ಯಗಳನ್ನು ಯುವ ಸಮುದಾಯ ಹಾಗೂ ವಿದ್ಯಾರ್ಥಿಗಳು ಸದುಪಯೋಗ ಮಾಡಿಕೊಳ್ಳಬೇಕು’ ಎಂದರು.

ADVERTISEMENT

 ಪುರಸಭೆ ಅಧ್ಯಕ್ಷೆ ಅನ್ನಪೂರ್ಣ ಯಲಿಗಾರ, ತಹಶೀಲ್ದಾರ್‌ ಶ್ರೀಶೈಲ ತಳವಾರ, ಕ್ಷೇತ್ರ ಶಿಕ್ಷಣಾಧಿಕಾರಿ ಗುರುನಾಥ ಹೂಗಾರ, ಅಜ್ಜಪ್ಪ ಹುಡೇದ, ಸಿಪಿಐ ಮಂಜುನಾಥ ನಡುವಿನಮನಿ, ರಾಚನಗೌಡ ಪಾಟೀಲ, ರಾಚಪ್ಪ ಅಳಗವಾಡಿ, ಬಸಪ್ಪ ಮಳಗಿ, ಉಮೇಶ ಯಳ್ಳೂರ, ತಾಲ್ಲೂಕು ದೈಹಿಕ ಶಿಕ್ಷಣ ಶಿಕ್ಷಣಾಧಿಕಾರಿ ಎನ್. ಆರ್.ನೀಡಗುಂದಿ ಸೇರಿದಂತೆ ಅನೇಕರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.