ಗದಗ: ಪರಿಸರ ಸಂರಕ್ಷಣೆ ಎಲ್ಲರ ಕರ್ತವ್ಯವಾಗಿದೆ ಎಂದು ಪರಿಸರ ಅಧಿಕಾರಿ ಶೋಭಾ ಪೋಳ ತಿಳಿಸಿದರು.
ಜಿಲ್ಲಾಡಳಿತ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾದೇಶಿಕ ಕಚೇರಿ ಹಾಗೂ ಆರ್.ಎನ್.ಎಸ್ ಮೋಟರ್ಸ್ ಆಶ್ರಯದಲ್ಲಿ ‘ಪರಿಸರಕ್ಕೆ ಪೂರಕವಾದ ಜೀವನ ಶೈಲಿಗೆ ಸಾಮೂಹಿಕ ಪ್ರೋತ್ಸಾಹ’ ವಿಷಯ ಕುರಿತ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
‘ಕೈಗಾರಿಕೆಗಳಲ್ಲಿ ತ್ಯಾಜ್ಯ ನೀರಿನ ಸಂಸ್ಕರಣಾ ಘಟಕ ಅಳವಡಿಸಿಕೊಳ್ಳಬೇಕು. ಆಹಾರ ಧಾನ್ಯ ಬೆಳೆಯಲು ರಾಸಾಯನಿಕ ಗೊಬ್ಬರ ಉಪಯೋಗಿಸುವುದರಿಂದ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ಪರಿಸರವನ್ನು ಪ್ರೀತಿಯಿಂದ ಪೋಷಿಸಿ ಬೆಳೆಸಬೇಕು’ ಎಂದರು.
ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಎಲ್ಲ ಅಧಿಕಾರಿಗಳು, ಸಿಬ್ಬಂದಿ ಪರಿಸರ ಸಂರಕ್ಷಣೆಯ ಪ್ರಮಾಣ ವಚನ ಸ್ವೀಕರಿಸಿದರು. ಪ್ರಕಾಶ ಅಧ್ಯಕ್ಷತೆ ವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.