ಗಜೇಂದ್ರಗಡ: ತಾಲ್ಲೂಕಿನ ರಾಜೂರ ಹಾಗೂ ನೆಲ್ಲೂರ ಗ್ರಾಮಗಳ ಸರ್ಕಾರಿ ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆ ಆವರಣದಲ್ಲಿ ಈಚೆಗೆ ಸುರಿದ ಮಳೆ ನೀರು ಸಂಗ್ರಹವಾಗಿ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗಿದ್ದ ಹಿನ್ನೆಲೆಯಲ್ಲಿ ತಾಲ್ಲೂಕು ಪಂಚಾಯ್ತಿ ಇಒ ಬಸವರಾಜ ಬಡಿಗೇರ ಹಾಗೂ ತಹಶೀಲ್ದಾರ್ ಕಿರಣಕುಮಾರ ಕುಲಕರ್ಣಿ ಅವರು ಶಾಲೆಗೆ ಸೋಮವಾರ ಭೇಟಿ ನೀಡಿ ಪರಿಶೀಲಿಸಿದರು.
ಪ್ರತಿ ಬಾರಿ ಮಳೆ ಸಂದರ್ಭದಲ್ಲಿ ಶಾಲಾ ಆವರಣದಲ್ಲಿ ನೀರು ಸರಾಗವಾಗಿ ಹರಿಯದೆ ಸಂಗ್ರಹವಾಗಿ ನಿಲ್ಲುತ್ತದೆ’ ಎಂದು ಗ್ರಾಮಸ್ಥರು ಅಧಿಕಾರಿಗಳ ಗಮನಕ್ಕೆ ತಂದರು.
ಶಾಲಾ ಆವರಣದೊಳಗೆ ನೀರು ನುಗ್ಗದಂತೆ, ಮಳೆ ಸಂದರ್ಭದಲ್ಲಿ ನೀರು ನಿಲ್ಲದಂತೆ ಕ್ರಮ ಕೈಗೊಳ್ಳುವಂತೆ ಮುಶಿಗೇರಿ ಪಿಡಿಒಗೆ ಅಧಿಕಾರಿಗಳು ಸೂಚಿಸಿದರು. ಶಿಕ್ಷಕರು, ಗ್ರಾಮ ಪಂಚಾಯಿತಿ ಸದಸ್ಯರು, ಗ್ರಾಮಸ್ಥರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.