ADVERTISEMENT

ನರೇಗಲ್ | ಹಣದ ಮೋಹ: 'ಯುವಕರು ಕೃಷಿಯಿಂದ ವಿಮುಖ'

ವಿವಿಧ ಜಿಲ್ಲೆಯ ಕೃಷಿ ಸಾಧಕರಿಗೆ ಸನ್ಮಾನ ಕಾರ್ಯಕ್ರಮ

​ಪ್ರಜಾವಾಣಿ ವಾರ್ತೆ
Published 26 ಜೂನ್ 2024, 15:54 IST
Last Updated 26 ಜೂನ್ 2024, 15:54 IST
ನರೇಗಲ್‌ ಪಟ್ಟಣದ ಅನ್ನದಾನೇಶ್ವರ ಪ್ರೌಢಶಾಲೆಯ ಆವರಣದಲ್ಲಿ ಈಚೆಗೆ ನಡೆದ ಕಾರ್ಯಕ್ರಮದಲ್ಲಿ ಕೃಷಿ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿವಿಧ ಜಿಲ್ಲೆಯ ಸಾಧಕರನ್ನು ಸನ್ಮಾನಿಸಲಾಯಿತು
ನರೇಗಲ್‌ ಪಟ್ಟಣದ ಅನ್ನದಾನೇಶ್ವರ ಪ್ರೌಢಶಾಲೆಯ ಆವರಣದಲ್ಲಿ ಈಚೆಗೆ ನಡೆದ ಕಾರ್ಯಕ್ರಮದಲ್ಲಿ ಕೃಷಿ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿವಿಧ ಜಿಲ್ಲೆಯ ಸಾಧಕರನ್ನು ಸನ್ಮಾನಿಸಲಾಯಿತು   

ನರೇಗಲ್:‌ ನಮ್ಮ ದೇಶದಲ್ಲಿ ಕೃಷಿ ಕಾಯಕ ಮಾಡುವ ರೈತನಿಲ್ಲದಿದ್ದರೆ ಪ್ರತಿಯೊಬ್ಬರು ತುತ್ತು ಅನ್ನಕ್ಕಾಗಿ ನರಳುವ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಆದ್ದರಿಂದ ಕೃಷಿಗೆ ಪ್ರಥಮ ಆದ್ಯತೆ ನೀಡಿಬೇಕಾಗಿದೆ. ಹಣದ ವ್ಯಾಮೋಹದಲ್ಲಿ ತೇಲುತ್ತಿರುವ ಯುವ ಜನಾಂಗ ಪ್ರಕೃತಿ ಮಡಿಲಿಗೆ ಹಿಂತಿರುಗುವ ಅನಿವಾರ್ಯತೆ ಇದೆ ಎಂದು ದಾವಣಗೇರಿಯ ಕೃಷಿ ತಜ್ಞ ವೆಂಕಟ ರಾಮಾಂಜನೇಯ ಸ್ವಾಮಿ ಹೇಳಿದರು.

ಪಟ್ಟಣದ ಅನ್ನದಾನೇಶ್ವರ ಪ್ರೌಢಶಾಲೆಯ ಆವರಣದಲ್ಲಿ ಈಚೆಗೆ ನಡೆದ ವಿವಿಧ ಜಿಲ್ಲೆಯ ಕೃಷಿ ಸಾಧಕರ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮನುಷ್ಯ ಎದುರಿಸುತ್ತಿರುವ ಆರ್ಥಿಕ, ಆರೋಗ್ಯದ ಸಮಸ್ಯೆಗಳಿಗೆ ಪ್ರಕೃತಿ ಹಾಗೂ ಕೃಷಿ ಪರಿಹಾರ ನೀಡಲಿದೆ. ಪರಿಸರದಲ್ಲಿ ಸಿಗುವ ಔಷಧಿ ಗುಣಗಳ ನಾಟಿ ವೈದ್ಯಕೀಯ ಪದ್ಧತಿ ಭಾರತದ ಶ್ರೇಷ್ಠ ಪರಂಪರೆಯಾಗಿದ್ದು ಇದನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ವ್ಯಾಪಕವಾಗಿ ಪ್ರಯತ್ನಗಳು ನಡೆಯಬೇಕು ಎಂದರು. ನಾಟಿ ಔಷಧಿ ಅನೇಕ ರೋಗಗಳಿಗೆ ಸುಲಭವಾಗಿ ನಾಟುವುದರಿಂದ ಆ ಹೆಸರು ಬಂದಿದೆ, ಇದಕ್ಕೆ ಸರಿಸಾಟಿ ಬೇರೆ ಯಾವುದೂ ಇಲ್ಲ, ಭೌತಿಕ ಬಡತನ ಹಾಗೂ ಸಂಕುಚಿತ ಭಾವನೆಯಿಂದ ಈ ಪದ್ಧತಿ ಮೊಟಕುಗೊಳ್ಳುತ್ತಿದೆ ಎಂದರು.

ADVERTISEMENT

ಕಲಘಟಗಿಯ ನೈಸರ್ಗಿಕ ಕೃಷಿಕ ನಿಂಗಯ್ಯ ಹಿರೇಮಠ ಮಾತನಾಡಿ, ನಮ್ಮ ಪೂರ್ವಜ್ಜರ ಕಾಲದಿಂದಲೂ ಸಾವಯವ ಗೊಬ್ಬರಗಳನ್ನು ಬಳಸಿ ಬೇಸಾಯ ಮಾಡುತ್ತಾ ಬಂದಿದ್ದೇವೆ. ಆದರೆ ಇತ್ತೀಚಿನ ದಿನಗಳಲ್ಲಿ ಕೃಷಿಗೆ ಉಪಯುಕ್ತ ವಲ್ಲದ ರಾಸಾಯನಿಕ ಗೊಬ್ಬರಗಳನ್ನು ಬಳಕೆ ಮಾಡುವ ಮೂಲಕ ಭೂಮಿಯ ಫಲವತ್ತತೆ ಹಾಗೂ ಸಮುದಾಯದ ಆರೋಗ್ಯವನ್ನು ಹಾಳು ಮಾಡಲಾಗುತ್ತದೆ. ಆದ್ದರಿಂದ ರೈತರು ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ದತಿಗೆ ಮರಳಬೇಕು ಎಂದರು. ಸಾವಯವ ಕೃಷಿ ಪದ್ಧತಿಯಲ್ಲಿ ಬೆಳೆದ ತರಕಾರಿ ಹಾಗೂ ಆಹಾರಧಾನ್ಯ ಸೇವಿಸುವ ಮೂಲಕ ಸದೃಢ ಆರೋಗ್ಯ ಕಾಪಾಡಿಕೊಳ್ಳಬೇಕಾಗಿದೆ ಎಂದು ಸಲಹೆ ನೀಡಿದರು.

ಕೃಷಿ ಕ್ಷೇತ್ರದಲ್ಲಿ ಸಾಧನೆ ಮಾಡಿದ ಧಾರವಾಡ ಕೃಷಿ ವಿಶ್ವವಿದ್ಯಾಲಯದ ಗೋಪಾಲ, ದಾವಣಗೇರಿಯ ಕೃಷಿ ತಜ್ಞ ವೆಂಕಟ ರಾಮಾಂಜನೇಯ ಸ್ವಾಮಿ, ಶಿರಹಟ್ಟಿಯ ಸಾವಯವ ಕೃಷಿಕ ಬಸವರಾಜ ನಾವಿ, ಬೆಳಗಾವಿಯ ಸಾವಯವ ಕೃಷಿಕ ತುಕಾರಾಮ ನಾಯಕ, ಕಲಘಟಗಿಯ ನೈಸರ್ಗಿಕ ಕೃಷಿಕ ನಿಂಗಯ್ಯ ಹಿರೇಮಠ, ರಟ್ಟಿಹಳ್ಳಿಯ ಕೃಷಿತಜ್ಞೆ ಸೌಭಾಗ್ಯ ಬಸನಗೌಡ್ರ ಅವರನ್ನು ಸನ್ಮಾನಿಸಲಾಯಿತು.

ಈ ವೇಳೆ ಕೋಟುಮಚಗಿ ಸಾವಯವ ಕೃಷಿ ವೀರೇಶ ನೇಗಲಿ, ಬಸವರಾಜ ದಿಂಡೂರ, ಜಿ.ಪಿ.ಪಾಟೀಲ, ಬಾವಿ ಬೆಟ್ಟಪ್ಪ, ಸೋಮಣ್ಣ ಡಾಣಗಲ್ಲ, ವೀರಣ್ಣ ಕರಿಬಿಷ್ಮಿ, ಶಕುಂತಲಾ ಸಿಂಧೂರ, ಜಿ.ಎ.ಪಾಟೀಲ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.