ಶಿರಹಟ್ಟಿ: ‘ರೈತರು, ಮಹಿಳೆಯರು, ವಿದ್ಯಾರ್ಥಿಗಳು ಸೇರದಂತೆ ಬಡವರ ಬದುಕಿಗೆ ಭದ್ರ ಅಡಿಪಾಯ ಹಾಕಿ ಅವರ ಆರ್ಥಿಕ ಅಭಿವೃದ್ಧಿಗೆ ಮುನ್ನುಡಿ ಬರೆದ ಪಂಚ ಗ್ಯಾರಂಟಿಗಳು, ರಾಜ್ಯದ ಜನರನ್ನು ನೆಮ್ಮದಿಯಿಂದ ಪ್ರಗತಿಯತ್ತ ಕೊಂಡ್ಯೊಯುತ್ತಿವೆ’ ಎಂದು ಸಚಿವ ಎಚ್.ಕೆ. ಪಾಟೀಲ ಹೇಳಿದರು.
ಸ್ಥಳೀಯ 16ನೇ ವಾರ್ಡ್ ಹಾಗೂ ಮಾಗಡಿ ಗ್ರಾಮದಲ್ಲಿ ₹3 ಕೋಟಿ ವೆಚ್ಚದಲ್ಲಿ ಸಿಸಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು.
‘ಕಾಂಗ್ರೆಸ್ ಪಕ್ಷ ಸದಾ ಬಡವರ ಪರ ಚಿಂತನೆ ಮಾಡುತ್ತಿದ್ದು, ಜನರು ನೆಮ್ಮದಿ, ಪ್ರೀತಿ, ವಾತ್ಸಲ್ಯ, ಶಾಂತಿಯಿಂದ ಸಹಬಾಳ್ವೆಯಿಂದ ಇರುವ ವಾತಾವರಣ ಕಲ್ಪಿಸುತ್ತದೆ. ಗ್ಯಾರಂಟಿ ಯೋಜನೆಗಳಿಂದ ರಾಜ್ಯದಲ್ಲಿ ಒಂದು ಕೋಟಿಗೂ ಅಧಿಕ ಕುಟುಂಬಗಳನ್ನು ಬಡತನ ರೇಖೆಯಿಂದ ಮೇಲಕ್ಕೆತ್ತುವ ಕ್ರಾಂತಿಕಾರಿ ಕಾರ್ಯವನ್ನು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮಾಡಿದೆ’ ಎಂದರು.
ಶಾಸಕ ಡಾ. ಚಂದ್ರು ಲಮಾಣಿ, ಮಾಜಿ ಶಾಸಕ ರಾಮಣ್ಣ ಲಮಾಣಿ, ಸುಜಾತಾ ದೊಡ್ಡಮನಿ, ಮೈಲಾರಪ್ಪ ಹಾದಿಮನಿ, ಗುರುನಾಥ ದಾನಪ್ಪನವರ, ಪಟ್ಟಣ ಪಂಚಾಯಿತಿ ಅಧ್ಯಕ್ಷೆ ದೇವಕ್ಕ ಗುಡಿಮನಿ, ಉಪಾಧ್ಯಕ್ಷೆ ನೀಲವ್ವ ಹುಬ್ಬಳ್ಳಿ, ದೇವಪ್ಪ ಲಮಾಣಿ, ಹುಮಾಯೂನ್ ಮಾಗಡಿ, ಮಂಜುನಾಥ ಗಂಟಿ, ಹೊನ್ನಪ್ಪ ಶಿರಹಟ್ಟಿ, ಸಂದೀಪ ಕಪ್ಪತ್ತನವರ, ದೇವಪ್ಪ ಆಡೂರ, ಆನಂದ ಮಾಳೆಕೋಪ್ಪ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.