ADVERTISEMENT

ಹೊಳೆ ಆಲೂರು-ಬಾದಾಮಿ ರಸ್ತೆ ಸಂಪರ್ಕ ಕಡಿತ              

​ಪ್ರಜಾವಾಣಿ ವಾರ್ತೆ
Published 8 ಸೆಪ್ಟೆಂಬರ್ 2019, 7:58 IST
Last Updated 8 ಸೆಪ್ಟೆಂಬರ್ 2019, 7:58 IST
   

ಗದಗ: ಮಲಪ್ರಭಾ ನದಿ ಉಕ್ಕಿ ಹರಿಯುತ್ತಿರುವುದರಿಂದ ಹೊಳೆ ಆಲೂರು- ಬಾದಾಮಿ ನಡುವಿನ ಸೇತುವೆ ನದಿಯಲ್ಲಿ ಮುಳುಗಿದ್ದು, ರಸ್ತೆ ಸಂಪರ್ಕ ಸಂಪೂರ್ಣ ಕಡಿತವಾಗಿದೆ. ಇದರಿಂದ ಸಂಚಾರಕ್ಕೆ ತೊಂದರೆಯಾಗಿದೆ.

ಕೊಣ್ಣೂರು ಬಳಿ ಹುಬ್ಬಳ್ಳಿ -ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿ ಕುಸಿಯುವ ಸಾಧ್ಯತೆ ಇರುವುದರಿಂದ ಶನಿವಾರ ಸಂಜೆಯಿಂದ ವಾಹನ ಸಂಚಾರ ಬಂದ್ ಮಾಡಲಾಗಿದ್ದು, ಯಥಾಸ್ಥಿತಿ ಮುಂದುವರಿದಿದೆ.

ವಿಜಯಪುರ, ಬಾಗಲಕೋಟೆ ಜಿಲ್ಲೆಯಿಂದ ಹುಬ್ಬಳ್ಳಿಯತ್ತ ಬರುವ ಮತ್ತು ಹೋಗುವ ವಾಹನಗಳು ರೋಣ ಮತ್ತು ರಾಮದುರ್ಗ ಮಾರ್ಗವಾಗಿ ಸುತ್ತು ಬಳಸಿ ಸಂಚರಿಸುತ್ತಿವೆ.

ADVERTISEMENT

ನವಿಲುತೀರ್ಥದಿಂದ ಸದ್ಯ 21 ಸಾವಿರ ಕ್ಯುಸೆಕ್ ನೀರು ಹೊರಬಿಡಲಾಗುತ್ತಿದ್ದು, ಸಂಜೆ ವೇಳೆಗೆ ಇನ್ನು ಹೆಚ್ಚಿನ ನೀರನ್ನು ನದಿಗೆ ಬಿಡುವ ಸಾಧ್ಯತೆ ಇರುವುದರಿಂದ ಗದಗ ಜಿಲ್ಲೆಯ ಮಲಪ್ರಭಾ ನದಿ ಪಾತ್ರದಲ್ಲಿ ಪ್ರವಾಹ ಮತ್ತಷ್ಟು ಹೆಚ್ಚುವ ಸಾಧ್ಯತೆ ಇರುವುದರಿಂದ ಜನರು ಆತಂಕಕ್ಕೆ ಒಳಗಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.