ADVERTISEMENT

ಕೆ.ಎಚ್.ಸಾವಿತ್ರಿಗೆ ದತ್ತಿನಿಧಿ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 25 ಜುಲೈ 2024, 12:40 IST
Last Updated 25 ಜುಲೈ 2024, 12:40 IST
ಕೆ.ಎಚ್‌.ಸಾವಿತ್ರಿ
ಕೆ.ಎಚ್‌.ಸಾವಿತ್ರಿ   

ಗದಗ: ಗದಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ 2024ನೇ ಸಾಲಿನ ‘ಮಾತೋಶ್ರೀ ಗುರವ್ವ ಶಿವಲಿಂಗಪ್ಪ ಹೊರಟ್ಟಿ ದತ್ತಿನಿಧಿ ಪ್ರಶಸ್ತಿ’ಗೆ ಬೆಂಗಳೂರಿನ ‘ಸಿನಿ ಜೋಶ್‌’ ಮಾಸಪತ್ರಿಕೆಯ ಪ್ರಧಾನ ಸಂಪಾದಕಿ ಕೆ.ಎಚ್.ಸಾವಿತ್ರಿ ಆಯ್ಕೆಯಾಗಿದ್ದಾರೆ.

ಗದಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರಾಜು ಹೆಬ್ಬಳ್ಳಿ ಹಾಗೂ ಅವ್ವ ಸೇವಾ ಟ್ರಸ್ಟ್‌ ಸಂಚಾಲಕ ಡಾ. ಬಸವರಾಜ ಧಾರವಾಡ ನೇತೃತ್ವದ ಸಮಿತಿ ಈ ಆಯ್ಕೆ ಮಾಡಿದೆ. ಪ್ರಶಸ್ತಿಯು ₹10 ಸಾವಿರ ನಗದು ಹಾಗೂ ಫಲಕ ಒಳಗೊಂಡಿದೆ.

ಗದಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಅವ್ವ ಸೇವಾ ಟ್ರಸ್ಟ್‌ನವರು ಮಾತೋಶ್ರೀ ಗುರವ್ವ ಶಿವಲಿಂಗಪ್ಪ ಹೊರಟ್ಟಿ ಅವರ ಸ್ಮರಣಾರ್ಥ ದತ್ತಿನಿಧಿ ಸ್ಥಾಪಿಸಿದ್ದು, ಪತ್ರಕರ್ತೆಯರಿಗೆ ನೀಡುವ ರಾಜ್ಯ ಮಟ್ಟದ ಪ್ರಶಸ್ತಿ ಇದಾಗಿದೆ. 

ADVERTISEMENT

ಜುಲೈ 28ರಂದು ಜಿಲ್ಲಾ ವಾರ್ತಾ ಇಲಾಖೆ ಸಹಯೋಗದಲ್ಲಿ ಗದಗ ನಗರದಲ್ಲಿ ನಡೆಯಲಿರುವ ಜಿಲ್ಲಾ ಮಟ್ಟದ ಪತ್ರಿಕಾ ದಿನಾಚರಣೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ಕೆ.ಪಾಟೀಲ ಪ್ರಶಸ್ತಿ ಪ್ರದಾನ ಮಾಡುವರು ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.