ADVERTISEMENT

‘ಯೋಗದಿಂದ ಸದೃಡ ಆರೋಗ್ಯ’

​ಪ್ರಜಾವಾಣಿ ವಾರ್ತೆ
Published 19 ಜೂನ್ 2024, 15:54 IST
Last Updated 19 ಜೂನ್ 2024, 15:54 IST
ನರಗುಂದದ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯಲ್ಲಿ ಆಯುಷ್ ಹಾಗೂ ಶಿಕ್ಷಣ ಇಲಾಖೆ ಆಶ್ರಯದಲ್ಲಿ 10ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಯೋಗ ತರಬೇತಿ ನಡೆಯಿತು
ನರಗುಂದದ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯಲ್ಲಿ ಆಯುಷ್ ಹಾಗೂ ಶಿಕ್ಷಣ ಇಲಾಖೆ ಆಶ್ರಯದಲ್ಲಿ 10ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಯೋಗ ತರಬೇತಿ ನಡೆಯಿತು   

ನರಗುಂದ: ‘ನಿತ್ಯ ಯೋಗಾಸನಕ್ಕೆ ಮಾಡಬೇಕು. ಯೋಗದಿಂದ ಸದೃಢ ಆರೋಗ್ಯ ಹೊಂದಲು ಸಾಧ್ಯ’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಗುರುನಾಥ್ ಹೂಗಾರ ಹೇಳಿದರು.

ಪಟ್ಟಣದ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯಲ್ಲಿ ಆಯುಷ್ ಹಾಗೂ ಶಿಕ್ಷಣ ಇಲಾಖೆ ಆಶ್ರಯದಲ್ಲಿ 10ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಬುಧವಾರ ನಡೆದ ಯೋಗೋತ್ಸವ ಹಾಗೂ ಯೋಗ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.‌

‘ಯೋಗದಿಂದ ರೋಗ ದೂರ. ಜಗತ್ತಿಗೆ ಭಾರತ ಯೋಗ ಗುರುವಾಗಿದೆ. ಎಲ್ಲರೂ ಯೋಗಾಭ್ಯಾಸದ ಮೂಲಕ ದೈಹಿಕ ಹಾಗೂ ಮಾನಸಿಕ ಆರೋಗ್ಯ ಹೊಂದಬೇಕು’ ಎಂದರು.

ADVERTISEMENT

ದೈಹಿಕ ಶಿಕ್ಷಣಾಧಿಕಾರಿ ಎನ್.ಆರ್.ನಿಡಗುಂದಿ ಮಾತನಾಡಿ, ‘10ನೇ ಅಂತರರಾಷ್ಟ್ರೀಯ ಯೋಗ ದಿನವನ್ನು ಸಂಭ್ರಮದಿಂದ ಆಚರಿಸಲು ಸಿದ್ಧತೆ ನಡೆಸಲಾಗಿದೆ. ಇದರ ಪೂರ್ವಭಾವಿಯಾಗಿ ತರಬೇತಿ ನೀಡಲಾಗುತ್ತಿದೆ’ ಎಂದರು.

ಅಧ್ಯಕ್ಷತೆ ವಹಿಸಿ ಮುಖ್ಯ ಶಿಕ್ಷಕ ಎಸ್.ಎಸ್.ಹಿರೇಮಠ ಮಾತನಾಡಿದರು. ತರಬೇತುದಾರರಾಗಿ ಶಿಕ್ಷಕಿ ಭೂಮಿಕಾ ಅಂಗಡಿ ಭಾಗವಹಿಸಿದ್ದರು. ವಿದ್ಯಾರ್ಥಿಗಳಿಂದ ಯೋಗ ಪ್ರದರ್ಶನ ನಡೆಯಿತು. ವೈದ್ಯಾಧಿಕಾರಿಗಳಾದ ಡಾ.ಅನಿತಾ ಉತ್ತೂರ, ಡಾ.ಬಸವರಾಜ ಹಳೆಮ್ಮನವರ ಹಾಗೂ ಶಿಕ್ಷಕರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.