ಗದಗ: ಕಾಳಸಂತೆಯಲ್ಲಿ ರೆಮ್‌ಡಿಸಿವಿರ್ ಮಾರಾಟ ಮಾಡುತ್ತಿದ್ದ ಜಾಲ ಭೇದಿಸಿರುವ ನಗರದ ಪೊಲೀಸರು ಆರೋಗ್ಯ ಇಲಾಖೆ ಸಿಬ್ಬಂದಿ ಸೇರಿದಂತೆ ನಾಲ್ಕು ಮಂದಿಯನ್ನು ಬಂಧಿಸಲಾಗಿದೆ. ಮಹಿಳಾ ಆರೋಪಿಯ ಪತ್ತೆಗೆ ಬಲೆ ಬೀಸಿದ್ದಾರೆ.
ಮಹಮದ್ ಇಸ್ಮಾಯಿಲ್, ಫಿರೋಜ್ ಖಾನ್, ಜಿಮ್ಸ್‌ನ ಲ್ಯಾಬ್ ಟೆಕ್ನೀಷಿಯನ್ ಗವಿಸಿದ್ದಯ್ಯ ಹಿರೇಮಠ, ರಮೇಶ ಚವಟಗಿ ಹಾಗೂ ಶುಶ್ರೂಷಕಿ ಜ್ಯೋತಿ ಲಮಾಣಿ ಆರೋಪಿಗಳು.
‘ಜೀವರಕ್ಷಕ ಚುಚ್ಚುಮದ್ದನ್ನು ₹ 30 ಸಾವಿರಕ್ಕೆ ಒಂದರಂತೆ ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಸುಳಿವು ಆಧರಿಸಿ ಸಿಇಎನ್ ಠಾಣೆಯ ಇನ್‌ಸ್ಪೆಕ್ಟರ್ ಮಹಾಂತೇಶ ಟಿ. ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ, ಆರೋಪಿಗಳನ್ನು ಬಂಧಿಸಿದೆ. ಅವರು ಗದಗ–ಮುಳಗುಂದ ರಸ್ತೆಯ ರಾಧಾಕೃಷ್ಣ ನಗರದ ಬಳಿ ಸಿಕ್ಕಿಬಿದ್ದಿದ್ದಾರೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್. ತಿಳಿಸಿದ್ದಾರೆ.
ಪೊಲೀಸರು ಬಂಧಿತರಿಂದ 14 ರೆಮ್‌ಡಿಸಿವಿರ್, ₹ 2,500 ನಗದು ಹಾಗೂ 4 ಮೊಬೈಲ್ ವಶಪಡಿಸಿಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.