ADVERTISEMENT

ರೋಣ | ಆರೋಗ್ಯ ಇಲಾಖೆ ಯೋಜನೆ ಸದುಪಯೋಗಕ್ಕೆ ಮಾಹಿತಿ ಅಗತ್ಯ: ಲಲಿತಾ ಹಿರೇಮಠ

​ಪ್ರಜಾವಾಣಿ ವಾರ್ತೆ
Published 23 ನವೆಂಬರ್ 2023, 15:59 IST
Last Updated 23 ನವೆಂಬರ್ 2023, 15:59 IST
ಆರೋಗ್ಯ ಇಲಾಖೆಯ ಯೋಜನೆಗಳ ಕುರಿತು ನಡೆದ ಮಾಹಿತಿ ಕಾರ್ಯಾಗಾರವನ್ನು ಪ್ರಾಚಾರ್ಯ ಸಿ.ಬಿ ಪೋಲಿಸಪಾಟೀಲ ಉದ್ಘಾಟಿಸಿದರು
ಆರೋಗ್ಯ ಇಲಾಖೆಯ ಯೋಜನೆಗಳ ಕುರಿತು ನಡೆದ ಮಾಹಿತಿ ಕಾರ್ಯಾಗಾರವನ್ನು ಪ್ರಾಚಾರ್ಯ ಸಿ.ಬಿ ಪೋಲಿಸಪಾಟೀಲ ಉದ್ಘಾಟಿಸಿದರು   

ರೋಣ: ‘ಬಡ ಮತ್ತು ಮದ್ಯಮ ವರ್ಗಗಳನ್ನು ಗಮನದಲ್ಲಿಟ್ಟುಕೊಂಡು ಆರೋಗ್ಯ ಇಲಾಖೆ ಆರೋಗ್ಯಕ್ಕೆ ಸಂಬಂಧಿಸಿದ ಯೋಜನೆಗಳನ್ನು ಜಾರಿಗೆ ತಂದಿದೆ. ಅವುಗಳ ಸದುಪಯೋಗ ಪಡೆದುಕೊಳ್ಳಲು ಮಾಹಿತಿ ನೀಡುವ ಅಗತ್ಯವಿದ್ದು, ಕಾಲೇಜು ವಿದ್ಯಾರ್ಥಿಗಳಿಗೆ ಒಂದು ದಿನದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ’ ಎಂದು ಆರೋಗ್ಯ ಇಲಾಖೆಯ ಅಧಿಕಾರಿ ಲಲಿತಾ ಹಿರೇಮಠ ಹೇಳಿದರು.

ನಗರದ ಕೆ.ಎಸ್.ಎಸ್ ಮಹಾವಿದ್ಯಾಲಯದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ನಡೆದ ಆರೋಗ್ಯ ಇಲಾಖೆಯ ವಿವಿಧ ಯೋಜನೆಗಳ ಕುರಿತು ಒಂದು ದಿನದ ಮಾಹಿತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿರು.

‘ವಿದ್ಯಾರ್ಥಿಗಳು ತಮ್ಮ ಕುಟುಂಬದ ಸದ್ಯಸ್ಯರು ಸೇರಿದಂತೆ ನೆರೆಹೊರೆಯವರಿಗೂ ಯೋಜನೆಗಳ ಬಗ್ಗೆ ಮಾಹಿತಿ ನೀಡಿ ಸರ್ಕಾರದ ಆರೋಗ್ಯ ಸೌಲಭ್ಯಗಳು ಎಲ್ಲರಿಗೂ ದೊರೆಯುವಂತೆ ಮಾಡಲು ಇಲಾಖೆಯೊಂದಿಗೆ ಸಹಕರಿಸಬೇಕು’ ಎಂದರು.

ADVERTISEMENT

ಆರೋಗ್ಯ ಇಲಾಖೆಯ ಸಿಬ್ಬಂದಿಯಾದ ಬಿ.ಆರ್.ಪಾಟೀಲ, ಬಿ.ಆರ್.ಮಣ್ಣೇರಿ, ರೇಷ್ಮಾ ದೇಸಾಯಿ, ಕೇಂದ್ರ ಮತ್ತು ರಾಜ್ಯ ಸರ್ಕಾರ ಆರೋಗ್ಯಕ್ಕೆ ಸಂಬಂಧಿಸಿದ ವಿವಿಧ ಯೋಜನೆಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

ಕಾರ್ಯಾಗಾರದಲ್ಲಿ ಮಾಹಿತಿ ನೀಡುತ್ತಿರುವ ಆರೋಗ್ಯ ಇಲಾಖೆಯ ಸಿಬ್ಬಂದಿ

ಕಾರ್ಯಾಗಾರದಲ್ಲಿ ಕಾಲೇಜಿನ ಪ್ರಾಚಾರ್ಯ ಸಿ.ಬಿ.ಪೋಲಿಸಪಾಟೀಲ, ಎನ್ಎಸ್ಎಸ್ ಕಾರ್ಯಕ್ರಮ ಅಧಿಕಾರಿ ಎಸ್.ಆರ್.ನದಾಫ್ ಉಪನ್ಯಾಸಕರಾದ ಎಂ.ಎಸ್ ದಳವಾಯಿ, ಎಂ.ಎಚ್ ನಾಯ್ಕರ, ಎಲ್. ಚಂದೂಕರ್, ವಿದ್ಯಾರ್ಥಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.