ಗದಗ: ಜಿಲ್ಲಾಡಳಿತದಿಂದ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ನ. 1ರಂದು ಬೆಳಿಗ್ಗೆ 9ಕ್ಕೆ ನಗರದ ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಸಾರ್ವಜನಿಕ ಧ್ವಜಾರೋಹಣ ಕಾರ್ಯಕ್ರಮ ನಡೆಯಲಿದೆ.
ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಧ್ವಜಾರೋಹಣ ನೆರವೇರಿಸುವರು. ನಂತರ ರಾಷ್ಟ್ರಗೀತೆ, ನಾಡಗೀತೆ, ಪರೇಡ್ ವೀಕ್ಷಣೆ, ಪಥ ಸಂಚಲನ ಮತ್ತು ಗೌರವವಂದನೆ ಸ್ವೀಕಾರ, ರಾಜ್ಯೋತ್ಸವದ ಸಂದೇಶ, ಸಾಂಸ್ಕೃತಿಕ ಕಾರ್ಯಕ್ರಮಗಳು, ಸಾಧಕರಿಗೆ ಸನ್ಮಾನ ಕಾರ್ಯಕ್ರಮಗಳು ನಡೆಯಲಿವೆ ಎಂದು ಪ್ರಕಟಣೆ ತಿಳಿಸಿದೆ.
ಗೌರವ ಸಮಾದೇಷ್ಟರ ಹುದ್ದೆ ನೇಮಕಾತಿಗೆ ಅರ್ಜಿ ಆಹ್ವಾನ
ಗದಗ: ಜಿಲ್ಲಾ ಗೃಹರಕ್ಷಕದಳದಲ್ಲಿ ಖಾಲಿ ಇರುವ ಗೌರವ ಸಮಾದೇಶ್ವರ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ನ. 16ರೊಳಗೆ ಜಿಲ್ಲಾಧಿಕಾರಿ ಕಾರ್ಯಾಲಯಕ್ಕೆ ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ಅಭ್ಯರ್ಥಿ ಪದವೀಧರರಾಗಿರಬೇಕು. ಅಭ್ಯರ್ಥಿಯು ಯಾವುದೇ ರಾಜಕೀಯ ಪಕ್ಷ ಅಥವಾ ಸಂಘಟನೆಯೊಂದಿಗೆ ಗುರುತಿಸಿಕೊಂಡಿರಬಾರದು. ಯಾವುದೇ ಅಪರಾಧದ ಹಿನ್ನಲೆ ಹೊಂದಿರಬಾರದು. 50 ವರ್ಷಕ್ಕಿಂತ ಹೆಚ್ಚು ವಯಸ್ಸು ಆಗಿರಬಾರದು. ಸಂಬಂಧಪಟ್ಟ ಜಿಲ್ಲಾ ಕೇಂದ್ರದ 20 ಕಿ.ಮೀ. ವ್ಯಾಪ್ತಿಯೊಳಗೆ ನೆಲೆಸಿರಬೇಕು. ದೈಹಿಕವಾಗಿ ಮತ್ತು ವೈದ್ಯಕೀಯವಾಗಿ ಸದೃಢರಾಗಿದ್ದಾರೆ ಎಂದು ಜಿಲ್ಲಾ ಶಸ್ತ್ರಚಿಕಿತ್ಸಕರಿಂದ ಪ್ರಮಾಣಪತ್ರ ಒದಗಿಸಬೇಕು.
ರಾಜ್ಯ ಸರ್ಕಾರದ ಆದೇಶಕ್ಕೆ ಒಳಪಟ್ಟು ಕಮಾಂಡೆಂಟ್‌ಗಳ ಅಧಿಕಾರದ ಅವಧಿಯು ಸಾಮಾನ್ಯವಾಗಿ ಐದು ವರ್ಷಗಳ ಅವಧಿಗೆ ಇರುತ್ತದೆ. ಕಮಾಂಡೆಂಟ್ ಹುದ್ದೆಯಲ್ಲಿ ಮುಂದುವರಿಯಲು ವೈದ್ಯಕೀಯವಾಗಿ ಅಥವಾ ದೈಹಿಕವಾಗಿ ಅನರ್ಹರಾಗಿದ್ದರೆ, ಸ್ವಯಂಪ್ರೇರಣೆಯಿಂದ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದರೆ, ಕ್ರಿಮಿನಲ್ ಅಪರಾಧದಲ್ಲಿ ಭಾಗಿಯಾಗಿದ್ದರೆ, ರಾಜಕೀಯ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದರೆ, ಅಧಿಕೃತ ಸ್ಥಾನ ಮತ್ತು ಸಂಪನ್ಮೂಲಗಳ ದುರುಪಯೋಗದಲ್ಲಿ ತೊಡಗಿಸಿಕೊಂಡಿದ್ದರೆ, ಹಣಕಾಸಿನ ಅವ್ಯವಹಾರದಲ್ಲಿ ತೊಡಗಿಸಿಕೊಂಡಿದ್ದರೆ ನೇಮಕವಾಗಿದ್ದ ಕಮಾಂಡೆಂಟ್ ಅನ್ನು ಅವರ ಹುದ್ದೆಯಿಂದ ವಜಾಗೊಳಿಸಲು ಪೊಲೀಸ್ ಮಹಾನಿರ್ದೇಶಕರು ಮತ್ತು ಕಮಾಂಡೆಂಟ್ ಜನರಲ್ ಸರ್ಕಾರಕ್ಕೆ ಶಿಫಾರಸು ಮಾಡಬಹುದಾಗಿದೆ.
ಕಮಾಂಡೆಂಟ್ ಹುದ್ದೆಗೆ ಸರ್ಕಾರದಿಂದ ಸಂಬಳ ನೀಡಲಾಗುವುದಿಲ್ಲ. ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದ ನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ ಎಂದು ಜಿಲ್ಲಾದಿಕಾರಿ ಗೋವಿಂದ ರೆಡ್ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.