ಡಂಬಳ: ಕೊಪ್ಪಳ ಜಿಲ್ಲೆಯ ಅಳವಂಡಿ ಗ್ರಾಮದ ಶ್ರೀ ಸಿದ್ದೇಶ್ವರ ಪದವಿ ಪೂರ್ವ ಕಾಲೇಜಿನ ಎನ್.ಎಸ್. ಎಸ್ ಘಟಕದ ಸ್ವಯಂ ಸೇವಕರು, ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಕಪ್ಪತ್ತಗುಡ್ಡದಲ್ಲಿ ಪರಿಸರ ಜಾಗೃತಿ ಮೂಡಿಸಿದರು.
ಕಾಲೇಜಿನ ಪ್ರಾಚಾರ್ಯ ಚಂದ್ರಶೇಖರ ದೊಡ್ಡಮನಿ ಮಾತನಾಡಿ, ‘ಸಾರ್ವಜನಿಕರು ಪರಿಸರದ ಮಹತ್ವ ಕುರಿತು ಹೆಚ್ಚು ಜಾಗೃತರಾಗಬೇಕು. ಕಪ್ಪತ್ತಗುಡ್ಡ ಬೆಲೆ ಕಟ್ಟಲಾಗದ ಅಸಂಖ್ಯಾತ ಜನರ ವನ್ಯೆಜೀವಿಗಳ ಜೀವನಾಡಿಯಾಗಿದೆ. ಜಾತ್ರೆಗೆ ಬರುವ ಭಕ್ತರು ಹಾಗೂ ಪ್ರವಾಸಿಗರು ಕಪ್ಪತ್ತಗುಡ್ಡದಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಬೇಕು’ ಎಂದರು.
‘ಪ್ರಾಥಮಿಕ ಹಂತದಿಂದಲೇ ಮಕ್ಕಳಿಗೆ ಪರಿಸರದ ಮಹತ್ವದ ಕುರಿತು ಜಾಗೃತಿ ಮೂಡಿಸಬೇಕು. ರಾಜ್ಯದ ವಿವಿಧ ಜಿಲ್ಲೆಗಳ ಶಾಲಾ– ಕಾಲೇಜು ವಿದ್ಯಾರ್ಥಿಗಳು ಹಾಗೂ ವಿಜ್ಞಾನಿಗಳು ಪರಿಸರವಾದಿಗಳು ಭೇಟಿ ನೀಡುವುದರಿಂದ ಕಪ್ಪತ್ತಗುಡ್ಡದ ಮಹತ್ವ ಅರಿಯಲು ಸಾಧ್ಯವಾಗುತ್ತದೆ’ ಎಂದು ಹೇಳಿದರು.
ಎನ್.ಎಸ್.ಎಸ್. ಕಾರ್ಯಕ್ರಮ ಅಧಿಕಾರಿ ಸಿದ್ದು ಅಂಗಡಿ, ಸಮಿತಿಯ ಸದಸ್ಯ ಎಂ.ಎಸ್. ಹೊಟ್ಟಿನ, ಶಿಕ್ಷಕ ನೀಲಪ್ಪ ಹಕ್ಕಂಡಿ,ಅಂಬರೇಶ ಬಚನಹಳ್ಳಿ, ಚೆನ್ನವೀರಯ್ಯ ಹಿರೇಮಠ ಅರಣ್ಯ ಇಲಾಖೆಯ ಗೋಪಾಲ ನಾಯಕ ಸಾಮಾಜಿಕ ಕಾರ್ಯಕರ್ತ ರಾಜು ಡಾವಣಗೇರಿ ಸೇರಿದಂತೆ ಕಾಲೇಜು ವಿದ್ಯಾರ್ಥಿಗಳು ಹಾಗೂ ಇಲಾಖೆಯ ಸಿಬ್ಬಂದಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.