ಗದಗ: ‘ಯಾರು ಯಾವ ಸಮುದಾಯಕ್ಕೋಸ್ಕರವಾಗಿ ಹೆಚ್ಚು ಕೆಲಸ ಮಾಡುತ್ತಾರೋ ಅವರನ್ನು ಒಂದು ಸಮುದಾಯದ ಪರ ಅಂತ ಬಿಂಬಿಸುವುದು ಬಿಜೆಪಿ ನಾಯಕರ ಹಳೆಯ ವರಸೆ’ ಎಂದು ಮಾಜಿ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ತಿರುಗೇಟು ನೀಡಿದರು.
ಸಂಸದ ಅನಂತಕುಮಾರ್ ಹೆಗಡೆ ಅವರು ಸಿಎಂಗೆ ‘ಸಿದ್ರಾಮುಲ್ಲಾಖಾನ್’ ಎಂದು ಕರೆದಿದ್ದಕ್ಕೆ ನಗರದಲ್ಲಿ ಭಾನುವಾರ ಪ್ರತಿಕ್ರಿಯಿಸಿದರು.
‘ಸಂಸದ ಅನಂತ ಕುಮಾರ್ ಹೆಗಡೆ ಐದು ವರ್ಷಗಳ ಕಾಲ ಏನೂ ಕೆಲಸ ಮಾಡಿಲ್ಲ, ಜನರ ಮುಂದೆ ಬಂದಿಲ್ಲ. ಸಂಸತ್ತಿನಲ್ಲಿ ಒಂದು ಪ್ರಶ್ನೆಯನ್ನೂ ಕೇಳಿಲ್ಲ. ಈಗ ಚುನಾವಣೆ ಬಂದಿದೆ ಅಂತ ಹಿಂದೂ ಮುಸ್ಲಿಂ ಸಮುದಾಯಗಳ ಮಧ್ಯೆ ಭಿನ್ನಾಭಿಪ್ರಾಯ ಹುಟ್ಟುಹಾಕಲು ಮಾತನಾಡುತ್ತಿದ್ದಾರೆ’ ಎಂದು ದೂರಿದರು.
‘ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡುವುದನ್ನು ಜನರು ಎಂದಿಗೂ ಒಪ್ಪುವುದಿಲ್ಲ. ಕರ್ನಾಟಕದ ಜನರ ಪರ ಒಂದೇ ಒಂದು ಪ್ರಶ್ನೆ ಕೇಳದ ಅನಂತ ಕುಮಾರ್ ಅವರಿಗೆ ಜನರು ಬುದ್ಧಿ ಕಲಿಸುತ್ತಾರೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.