ADVERTISEMENT

ಗ್ರಾಮೀಣಾಭಿವೃದ್ಧಿ ವಿವಿ: ಇಬ್ಬರಿಗೆ ಗೌರವ ಡಾಕ್ಟರೇಟ್‌

​ಪ್ರಜಾವಾಣಿ ವಾರ್ತೆ
Published 5 ಮಾರ್ಚ್ 2024, 15:34 IST
Last Updated 5 ಮಾರ್ಚ್ 2024, 15:34 IST
ಸಿ.ನಾರಾಯಣಸ್ವಾಮಿ
ಸಿ.ನಾರಾಯಣಸ್ವಾಮಿ   

ಗದಗ: ‘ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ವಿಶ್ವವಿದ್ಯಾಲಯದ ನಾಲ್ಕನೇ ಘಟಿಕೋತ್ಸವ ಬುಧವಾರ ನಡೆಯಲಿದೆ. ಇಬ್ಬರಿಗೆ ಗೌರವ ಡಾಕ್ಟರೇಟ್‌ ಮತ್ತು 244 ಮಂದಿ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುವುದು’ ಎಂದು ಕುಲಪತಿ ಪ್ರೊ. ವಿಷ್ಣುಕಾಂತ ಎಸ್‌.ಚಟಪಲ್ಲಿ ತಿಳಿಸಿದರು.

‘ಸಹಕಾರ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಕ್ಷೇತ್ರಕ್ಕೆ ಗಣನೀಯ ಕೊಡುಗೆ ನೀಡಿರುವ ಮತ್ತು ಕರ್ನಾಟಕ ರಾಜ್ಯದ ಐದನೇ ಹಣಕಾಸು ಆಯೋಗದ ಅಧ್ಯಕ್ಷರಾಗಿರುವ ಸಿ.ನಾರಾಯಣಸ್ವಾಮಿ ಹಾಗೂ ಕನ್ನಡ ಭಾಷೆ, ಸಂಸ್ಕೃತಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಕ್ಷೇತ್ರಕ್ಕೆ ಸಲ್ಲಿಸಿದ ಕೊಡುಗೆ ಪರಿಗಣಿಸಿ ಚಿರಂಜೀವಿ ಸಿಂಗ್‌ ಅವರಿಗೆ ಗೌರವ ಡಾಕ್ಟರೇಟ್‌ ಪ್ರದಾನ ಮಾಡಲಾಗುವುದು’ ಎಂದು ಅವರು ಮಂಗಳವಾರ ಸುದ್ದಿಗಾರರಿಗೆ ತಿಳಿಸಿದರು.

‘10 ವಿವಿಧ ಸ್ನಾತಕೋತ್ತರ ಕಾರ್ಯಕ್ರಮಗಳ 239 ಮಂದಿ ವಿದ್ಯಾರ್ಥಿಗಳು ಹಾಗೂ ಡಿಪ್ಲೊಮಾ ಕಾರ್ಯಕ್ರಮಗಳ ಐವರು ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುವುದು. ಅತ್ಯಧಿಕ ಅಂಕ ಗಳಿಸಿದ 11 ಮಂದಿ ವಿದ್ಯಾರ್ಥಿಗಳಿಗೆ ರಾಜ್ಯಪಾಲ ಥಾವರಚಂದ್‌ ಗೆಹಲೋತ್‌ ಚಿನ್ನದ ಪದಕ ಪ್ರದಾನ ಮಾಡುವರು. ಕೇಂದ್ರ ಪಂಚಾಯತ್‌ರಾಜ್‌ ಸಚಿವಾಲಯದ ಮಾಜಿ ಜಂಟಿ ಕಾರ್ಯದರ್ಶಿ ಡಾ. ಟಿ.ಆರ್‌.ರಘುನಂದನ್‌ ಘಟಿಕೋತ್ಸವ ಭಾಷಣ ಮಾಡುವರು. ಸಹ ಕುಲಾಧಿಪತಿ ಪ್ರಿಯಾಂಕ್‌ ಖರ್ಗೆ ಉಪಸ್ಥಿತರಿರುವರು’ ಎಂದು ತಿಳಿಸಿದರು.

ADVERTISEMENT
ಚಿರಂಜೀವಿ ಸಿಂಗ್‌

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.