ADVERTISEMENT

ಗಜೇಂದ್ರಗಡ: ಅಧ್ಯಕ್ಷ, ಉಪಾಧ್ಯಕ್ಷ ಪಟ್ಟಕ್ಕೆ ಪೈಪೋಟಿ

​ಪ್ರಜಾವಾಣಿ ವಾರ್ತೆ
Published 12 ಅಕ್ಟೋಬರ್ 2020, 8:41 IST
Last Updated 12 ಅಕ್ಟೋಬರ್ 2020, 8:41 IST
ಗಜೇಂದ್ರಗಡ ಪುರಸಭೆ ಕಾರ್ಯಾಲಯ
ಗಜೇಂದ್ರಗಡ ಪುರಸಭೆ ಕಾರ್ಯಾಲಯ   

ಗಜೇಂದ್ರಗಡ: ಸ್ಥಳೀಯ ಪುರಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದರೂ ಸಹ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳ ಮಿಸಲಾತಿ ಗೊಂದಲದಿಂದ ಕಳೆದೆರಡು ವರ್ಷಗಳಿಂದ ರಾಜಕೀಯ ಪಕ್ಷಗಳಿಗೆ ಅಧಿಕಾರ ಭಾಗ್ಯ ಲಭಿಸಿರಲಿಲ್ಲ. ಇದೀಗ ರಾಜ್ಯ ಸರ್ಕಾರ ಮಿಸಲಾತಿ ಪಟ್ಟಿ ಪ್ರಕಟಿಸಿದ್ದು, ಅಧ್ಯಕ್ಷ, ಉಪಾಧ್ಯಕ್ಷ ಪಟ್ಟ ಯಾರಿಗೆ ಲಭಿಸುತ್ತದೆ ಎಂಬ ಚರ್ಚೆಗಳು ಗರಿಗೆದರಿವೆ.

ಪಟ್ಟಣದ ಪುರಸಭೆಯ 23 ವಾರ್ಡ್‌ಗಳಿಗೆ ಕಳೆದೆರಡು ವರ್ಷಗಳ ಹಿಂದೆ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ 18, ಕಾಂಗ್ರೆಸ್ ಬೆಂಬಲಿತ 5 ಮಂದಿ ಆಯ್ಕೆಯಾಗಿದ್ದಾರೆ. ಬಿಜೆಪಿಯಲ್ಲಿ ಒಂಬತ್ತು ಪುರುಷ ಹಾಗೂ ಒಂಬತ್ತು ಮಹಿಳಾ ಸದಸ್ಯರು ಇದ್ದಾರೆ.

ಇದೀಗ ಪ್ರಕಟವಾಗಿರುವ ಮಿಸಲಾತಿಯ ಅನ್ವಯ ಅಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ, ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ‘ಅ’ ಮಹಿಳೆಗೆ ಮೀಸಲಾಗಿದೆ.

ADVERTISEMENT

ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ವರ್ಗಕ್ಕೆ ಮಿಸಲಾಗಿರುವುದರಿಂದ ಪುರುಷ ಹಾಗೂ ಮಹಿಳಾ ಸದಸ್ಯರು ಸ್ಪರ್ಧಿಯಾಗಲಿದ್ದಾರೆ. ಆದರೆ ಪುರಸಭೆಯ ಹಿಂದಿನ ಎರಡು ಅವಧಿಗೆ ಅಧ್ಯಕ್ಷ ಸ್ಥಾನ ಮಹಿಳೆಯರಿಗೆ ದೊರಕಿತ್ತು. ಹೀಗಾಗಿ ಈ ಬಾರಿ ಅಧ್ಯಕ್ಷ ಸ್ಥಾನದ ಮೇಲೆ ಪುರುಷರು ಕಣ್ಣಿಟ್ಟಿದ್ದಾರೆ ಎಂಬ ಮಾತು ಕೇಳಿಬಂದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.