ಲಕ್ಷ್ಮೇಶ್ವರ: ಆರೋಗ್ಯ ಇಲಾಖೆಯಿಂದ ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರಕ್ಕೆ ಮಂಜೂರಾದ ಆಂಬ್ಯುಲೆನ್ಸ್‌ಗೆ ಶಾಸಕ ಡಾ.ಚಂದ್ರು ಲಮಾಣಿ ಮಂಗಳವಾರ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಅವರು, ‘ಜನರ ಆರೋಗ್ಯ ಸುಧಾರಣೆಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹತ್ತಾರು ಯೋಜನೆಗಳನ್ನು ಜಾರಿಗೆ ತಂದಿವೆ. ಮಾಹಿತಿ ಕೊರತೆಯಿಂದ ಅವು ಸರಿಯಾಗಿ ಜನರನ್ನು ತಲುಪುತ್ತಿಲ್ಲ. ತುರ್ತು ಸಂದರ್ಭದಲ್ಲಿ ಆಂಬ್ಯುಲೆನ್ಸ್ ಸಾರ್ವಜನಿಕರಿಗೆ ಸೇವೆ ಒದಗಿಸಲಿದ್ದು, ಜನರು ಇಲಾಖೆ ಕಾರ್ಯಕ್ರಮಗಳ ಕುರಿತು ಮಾಹಿತಿ ಪಡೆದುಕೊಳ್ಳಬೇಕು’ ಎಂದರು.
ತಾಲ್ಲೂಕು ವೈದ್ಯಾಧಿಕಾರಿ ಡಾ.ಸುಭಾಷ ದಾಯಗೊಂಡ, ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಶ್ರೀಕಾಂತ ಕಾಟೆವಾಲೆ, ದುಂಡೇಶ ಕೊಟಗಿ, ಎಂ.ಆರ್. ಪಾಟೀಲ, ಶಿವಯೋಗಿ ಅಂಕಲಕೋಟಿ, ನೀಲಪ್ಪ ಹತ್ತಿ, ಗಿರೀಶ ಚೌರೆಡ್ಡಿ, ಸಿದ್ದಣ್ಣ ಸವಣೂರ, ಮಂಜುನಾಥ ಉಮಚಗಿ, ನವೀನ ಬೆಳ್ಳಟ್ಟಿ, ಅನಿಲ ಮುಳಗುಂದ, ದೇವಪ್ಪ ಗಡೇದ, ನಾಗರತ್ನ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.