ADVERTISEMENT

ದ್ವಿತೀಯ ಪಿಯುಸಿ ಪರೀಕ್ಷೆ-3: ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ

​ಪ್ರಜಾವಾಣಿ ವಾರ್ತೆ
Published 19 ಜೂನ್ 2024, 15:52 IST
Last Updated 19 ಜೂನ್ 2024, 15:52 IST

ಗದಗ: ದ್ವಿತೀಯ ಪಿಯುಸಿ ಪರೀಕ್ಷೆ-3 ಜೂನ್ 24ರಿಂದ ಜುಲೈ 5ರವರೆಗೆ ನಡೆಯಲಿದೆ.

ಪರೀಕ್ಷಾ ಸಮಯದಲ್ಲಿ ನಕಲು ಮಾಡುವುದು, ಪರೀಕ್ಷಾರ್ಥಿಗಳ ಬದಲು ಬೇರೆಯವರು ಪರೀಕ್ಷೆಗೆ ಹಾಜರಾಗುವುದು ಮುಂತಾದ ಅವ್ಯವಹಾರ ತಡೆಗಟ್ಟಲು ಮತ್ತು ಪರೀಕ್ಷಾ ಕೇಂದ್ರಗಳಲ್ಲಿ ಶಿಸ್ತು ಮತ್ತು ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಜಿಲ್ಲೆಯ 8 ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ಪರಿಮಿತಿಯೊಳಗೆ ಜೂನ್ 24ರಿಂದ ಜುಲೈ 5ರವರೆಗೆ ಬೆಳಿಗ್ಗೆ 9ರಿಂದ ಸಂಜೆ 5.30ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಪರೀಕ್ಷಾ ಸಮಯದಲ್ಲಿ ನಕಲು ಮಾಡುವುದು, ಪರೀಕ್ಷಾರ್ಥಿಗಳ ಬದಲು ಬೇರೆಯವರು ಪರೀಕ್ಷೆಗೆ ಹಾಜರಾಗುವುದು ಮುಂತಾದ ಅವ್ಯವಹಾರ ತಡೆಗಟ್ಟಲು ಮತ್ತು ಪರೀಕ್ಷಾ ಕೇಂದ್ರಗಳಲ್ಲಿ ಶಿಸ್ತು ಮತ್ತು ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಪ್ರತಿ ಪರೀಕ್ಷಾ ಕೇಂದ್ರಕ್ಕೆ ಒಬ್ಬ ವೀಕ್ಷಕರು, ಪ್ರಶ್ನೆಪತ್ರಿಕೆ ವಿತರಿಸುವ ಮಾರ್ಗಾಧಿಕಾರಿಗಳು ಹಾಗೂ ತ್ರಿಸದಸ್ಯರೊಳಗೊಂಡ ಪ್ರಶ್ನೆಪತ್ರಿಕಾ ಪಾಲಕರ ಮತ್ತು ದೃಢೀಕರಿಸುವವರ ಸಮಿತಿ ನೇಮಕ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.