ADVERTISEMENT

ಜಿಲ್ಲಾ ಮಟ್ಟದ ವಿಜ್ಞಾನ ಹಬ್ಬ ನಾಳೆಯಿಂದ

​ಪ್ರಜಾವಾಣಿ ವಾರ್ತೆ
Published 11 ಡಿಸೆಂಬರ್ 2019, 12:35 IST
Last Updated 11 ಡಿಸೆಂಬರ್ 2019, 12:35 IST
ಮುಂಡರಗಿ ಪಟ್ಟಣದ ಎಂ.ಸಿ.ಎಸ್. ಶಾಲೆಯಲ್ಲಿ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಮಕ್ಕಳ ವಿಜ್ಞಾನ ಹಬ್ಬದ ಪೂರ್ವಭಾವಿ ಸಭೆಯಲ್ಲಿ ಬಿಇಒ ಎಸ್.ಎನ್.ಹಳ್ಳಿಗುಡಿ ಮಾತನಾಡಿದರು
ಮುಂಡರಗಿ ಪಟ್ಟಣದ ಎಂ.ಸಿ.ಎಸ್. ಶಾಲೆಯಲ್ಲಿ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಮಕ್ಕಳ ವಿಜ್ಞಾನ ಹಬ್ಬದ ಪೂರ್ವಭಾವಿ ಸಭೆಯಲ್ಲಿ ಬಿಇಒ ಎಸ್.ಎನ್.ಹಳ್ಳಿಗುಡಿ ಮಾತನಾಡಿದರು   

ಮುಂಡರಗಿ: ‘ಪಟ್ಟಣದ ಎಂ.ಸಿ.ಎಸ್. ಶಾಲೆಯಲ್ಲಿ ಡಿ. 12, 13 ಹಾಗೂ 14ರಂದು ಜಿಲ್ಲಾ ಮಟ್ಟದ ಮಕ್ಕಳ ವಿಜ್ಞಾನ ಹಬ್ಬವನ್ನು ಹಮ್ಮಿಕೊಳ್ಳಲಾಗುವುದು. ಮಕ್ಕಳ ಹಬ್ಬದಲ್ಲಿ ಜಿಲ್ಲೆಯ ವಿವಿಧ ಶಾಲೆಗಳ ಸುಮಾರು 250 ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ’ ಎಂದು ಬಿಇಒ ಎಸ್.ಎನ್.ಹಳ್ಳಿಗುಡಿ ಹೇಳಿದರು.

ಪಟ್ಟಣದ ಎಂ.ಸಿ.ಎಸ್. ಶಾಲೆಯಲ್ಲಿ ಮಂಗಳವಾರ ಏರ್ಪಡಿಸಿದ್ದ ವಿಜ್ಞಾನ ಹಬ್ಬದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ‘ಹಬ್ಬದಲ್ಲಿ ರಾಜ್ಯದ ವಿವಿಧ ಭಾಗಗಳ 20 ಸಂಪನ್ಮೂಲ ವ್ಯಕ್ತಿಗಳು ಭಾಗವಹಿಸಲಿದ್ದಾರೆ. ಹೊರಗಿನಿಂದ ಬರುವ ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರಿಗೆ ವಸತಿ ವ್ಯವಸ್ಥೆ ಮಾಡಲಾಗಿದೆ. 125 ವಿದ್ಯಾರ್ಥಿಗಳಿಗೆ ಪಟ್ಟಣದ ವಿದ್ಯಾರ್ಥಿಗಳ ಮನೆಯಲ್ಲಿ ಊಟ ಹಾಗೂ ವಸತಿ ವ್ಯವಸ್ಥೆ ಮಾಡಲಾಗಿದೆ. ಅಚ್ಚುಕಟ್ಟಾಗಿ ಮಕ್ಕಳ ವಿಜ್ಞಾನ ಹಬ್ಬವನ್ನು ನಡೆಸಲು ಎಲ್ಲರೂ ಸಹಕರಿಸಬೇಕು’ ಎಂದು ಮನವಿ ಮಾಡಿದರು.

ಡಾ.ನಿಂಗು ಸೊಲಗಿ ಮಾತನಾಡಿ, ‘ಮಕ್ಕಳ ವಿಜ್ಞಾನ ಹಬ್ಬಕ್ಕಾಗಿ ಪುರಸಭೆ ಆವರಣ, ಕೆ.ಜಿ.ಎಸ್ ಶಾಲೆ ಸೇರಿ ಹಲವು ಭಾಗಗಳಲ್ಲಿ ಒಟ್ಟು ಹತ್ತು ಕಿರುಕೇಂದ್ರಗಳನ್ನು ತೆರೆದಿದ್ದು, ಒಂದೊಂದು ಕೇಂದ್ರದಲ್ಲಿ ಒಂದೊಂದು ವಿಷಯದ ಕುರಿತು ಮಕ್ಕಳಿಗೆ ಸಮಗ್ರ ಮಾಹಿತಿ ನೀಡಲಾಗುವುದು’ ಎಂದು ತಿಳಿಸಿದರು.

ADVERTISEMENT

ಆರ್.ಎಲ್.ಬದಾಮಿ ಮಾತನಾಡಿ, ‘ಹಬ್ಬದಲ್ಲಿ ಭಾಗವಹಿಸುವ 250 ವಿದ್ಯಾರ್ಥಿಗಳಿಗೆ ಟಿ ಶರ್ಟ್ ಹಾಗೂ ಅಗತ್ಯ ಸಾಮಗ್ರಿಗಳನ್ನು ಉಚಿತವಾಗಿ ಒದಗಿಸಲಾಗುವುದು. ಎಲ್ಲದಕ್ಕೂ ಸಾರ್ವಜನಿಕರಿಂದ ನೆರವು ಪಡೆಯಲಾಗಿದೆ’ ಎಂದು ತಿಳಿಸಿದರು.

ಮಕ್ಕಳ ವಿಜ್ಞಾನ ಹಬ್ಬದ ಸಂಯೋಜಕರಾದ ಎಂ.ಬಿ.ರಡ್ಡೇರ, ಶ್ರೀಧರ ಬಡಿಗೇರ, ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯಾಧಿಕಾರಿ ಗಂಗಾಧರ ಅಣ್ಣಿಗೇರಿ, ಎಸ್.ಎನ್.ಅಂಗಡಿ, ಬಸೇಗೌಡರ, ಪಿ.ಡಿ.ಹಿರೇಮಠ, ಪದ್ಮಾವತಿ ಹಮ್ಮಿಗಿಮಠ, ಚಿದಾನಂದ ವಡ್ಡರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.