ಲಕ್ಷ್ಮೇಶ್ವರ (ಗದಗ ಜಿಲ್ಲೆ): ತಾಲ್ಲೂಕಿನ ಶಿಗ್ಲಿ ಗ್ರಾಮದಲ್ಲಿ ಅಗತ್ಯ ಪ್ರಮಾಣದಲ್ಲಿ ಬಸ್‌ಗಳು ಇರದಿರುವುದು ಮತ್ತು ಇರುವ ಬಸ್‌ಗಳು ಭರ್ತಿಯಾಗಿ ಬರುವುದರಿಂದ ಇಲ್ಲಿಯ ಶಾಲಾ–ಕಾಲೇಜು ವಿದ್ಯಾರ್ಥಿಗಳು ಟ್ರ್ಯಾಕ್ಟರ್ ಇಲ್ಲವೇ ಬೇರೆ ವಾಹನ ಅವಲಂಬಿಸಬೇಕಿದೆ.
ಪ್ರತಿದಿನ ಶಿಗ್ಲಿಯ ಶಾಲೆ–ಕಾಲೇಜುಗಳಿಗೆ ಸುತ್ತಮುತ್ತಲಿನ ಹತ್ತಾರು ಗ್ರಾಮಗಳಿಂದ ನೂರಾರು ವಿದ್ಯಾರ್ಥಿಗಳು ಬರುತ್ತಾರೆ. ಆದರೆ, ಅವರಿಗೆ ಸಾಕಷ್ಟು ಬಸ್ ಸೌಲಭ್ಯ ಇಲ್ಲ. ಹೀಗಾಗಿ ಅವರು ದಿನವೂ ಬಸ್‌ಗಾಗಿ ಕಾಯುತ್ತಾರೆ. ಇಲ್ಲದಿದ್ದರೆ, ಟ್ರ್ಯಾಕ್ಟರ್ ಅಥವಾ ಲಭ್ಯವಿರುವ ವಾಹನಗಳ ಮೊರೆ ಹೋಗುತ್ತಾರೆ.
‘ರಾಜ್ಯ ಸರ್ಕಾರದ ಶಕ್ತಿ ಯೋಜನೆ ಅನುಷ್ಠಾನಕ್ಕೂ ಮುನ್ನ ಬಸ್ ಸಂಚಾರದ ವ್ಯವಸ್ಥೆ ಸರಿಯಾಗಿತ್ತು. ಆದರೆ, ಯೋಜನೆ ಅನುಷ್ಠಾನದ ಬಳಿಕ ಸಮಸ್ಯೆ ತಲೆದೋರಿದೆ. ಯೋಜನೆಗೆ ತಕ್ಕಂತೆ ಸರ್ಕಾರ ಹೆಚ್ಚಿನ ಬಸ್ ಸೌಲಭ್ಯ ಕಲ್ಪಿಸಬೇಕಿತ್ತು. ಆದರೆ, ಅದು ಸಾಧ್ಯವಾಗದ್ದಕ್ಕೆ ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ. ರಾಜ್ಯ ಸರ್ಕಾರ ಈಗಲಾದರೂ ವಿದ್ಯಾರ್ಥಿಗಳ ಸಂಕಷ್ಟ ಅರಿತು, ಪರಿಹರಿಸಬೇಕು’ ಎಂದು ಶಿಗ್ಲಿ ಗ್ರಾಮ ಪಂಚಾಯಿತಿ ಸದಸ್ಯ ಸಂತೋಷ ತಾಂದಳೆ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.