ನರೇಗಲ್: ಸಮೀಪದ ಹಾಲಕೆರೆ ಗ್ರಾಮದ ಅನ್ನದಾನೇಶ್ವರ ಸಂಸ್ಥಾನಮಠದ ಲಿಂ. ಗುರು ಅನ್ನದಾನ ಶ್ರೀಗಳ 46ನೇ ಪುಣ್ಯಸ್ಮರಣೋತ್ಸವ, ಹಿರಿಯ ತಾಯಂದಿರಿಗೆ ಸನ್ಮಾನ ಹಾಗೂ ಅಧ್ಯಾತ್ಮ ಪ್ರವಚನದ ಮಂಗಲೋತ್ಸವ ಮತ್ತು ಬೆಳ್ಳಿ ರಥೋತ್ಸವ ಕಾರ್ಯಕ್ರಮಗಳು ಆಗಸ್ಟ್ 27, 28 ರಂದು ನಡೆಯಲಿವೆ.
ಆ.27ಕ್ಕೆ ಬೆಳಿಗ್ಗೆ 10 ಗಂಟೆಗೆ ನಿಡಗುಂದಿಕೊಪ್ಪ ಶಾಖಾ ಶಿವಯೋಗ ಮಂದಿರದ ಚನ್ನಬಸವ ಸ್ವಾಮೀಜಿ ಷಟಸ್ಥಲ ಧ್ವಜಾರೋಹಣ ನೆರವೇರಿಸುವರು. ಮಧ್ಯಾಹ್ನ 12 ಗಂಟೆಗೆ ಮಹಾಗಣಾರಾಧನೆ, ಸಂಜೆ 7ಕ್ಕೆ ಪುಣ್ಯಸ್ಮರಣೋತ್ಸವ ಹಾಗೂ ಅಧ್ಯಾತ್ಮ ಪ್ರವಚನದ ಮಂಗಲೋತ್ಸವ ನಡೆಯಲಿದೆ.
ವಳಬಳ್ಳಾರಿಯ ಸುವರ್ಣಗಿರಿ ವಿರಕ್ತಮಠದ ಸಿದ್ಧಲಿಂಗ ಸ್ವಾಮೀಜಿ, ನೇರಡಗಂಬದ ಪಶ್ಚಮಾದ್ರಿ ಮಠದ ಪಂಚಮ ಸಿದ್ದಲಿಂಗ ಸ್ವಾಮೀಜಿ, ದರೂರು ಸಂಗನಬಸವೇಶ್ವರ ಮಠದ ಕೊಟ್ಟೂರು ಸ್ವಾಮೀಜಿ, ಗದಗ-ರಾಜೂರ ಹಿರೇಮಠದ ಅಭಿನವ ಪಂಚಾಕ್ಷರ ಸ್ವಾಮೀಜಿ, ಸೊರಟೂರ ಹಿರೇಮಠದ ಫಕೀರೇಶ್ವರ ಶಿವಾಚಾರ್ಯರು, ಗದಗ ಅಡವೀಂದ್ರಸ್ವಾಮಿ ಮಠದ ಮಹೇಶ್ವರ ಸ್ವಾಮೀಜಿ, ಶಾಸಕ ಜಿ.ಎಸ್. ಪಾಟೀಲ, ಮಾಜಿಶಾಸಕ ಕೆ. ಜಿ. ಬಂಡಿ, ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ, ಗದಗ ಮಾಜಿ ಶಾಸಕ ಡಿ.ಆರ್. ಪಾಟೀಲ ಪಾಲ್ಗೊಳ್ಳಲಿದ್ದಾರೆ. ನಂತರ ಅನ್ನದಾನ ವಿಜಯ ವಿದ್ಯಾ ಪ್ರಸಾರಕ ಸಮಿತಿಯ ಅಂಗಸಂಸ್ಥೆಯ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತವೆ.
ಆ.28 ರಂದು ಬೆಳಿಗ್ಗೆ 11 ಗಂಟೆಗೆ 501 ಮಹಿಳೆಯರಿಗೆ ಉಡಿ ತುಂಬುವ ಕಾರ್ಯಕ್ರಮ ನಡೆಯಲಿದೆ. ಸಂಜೆ 5 ಗಂಟೆಗೆ ಮಹಿಳೆಯರಿಂದ ಎಳೆಯಲ್ಪಡುವ ಬೆಳ್ಳಿ ರಥೋತ್ಸವಕ್ಕೆ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ, ವಿಕಲಚೇತನ ಮತ್ತು ಹಿರಿಯ ನಾಗರಿಕರ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಚಾಲನೆ ನೀಡಲಿದ್ದಾರೆ.
ಸಂಜೆ 6 ಗಂಟೆಗೆ ನಡೆಯುವ ಶಿವಾನುಭವ ಗೋಷ್ಠಿಯಲ್ಲಿ ಧಾರವಾಡ ಮುರಘಾಮಠದ ಮಲ್ಲಿಕಾರ್ಜುನ ಸ್ವಾಮೀಜಿ, ಮಣಕವಾಡ ಅನ್ನದಾನಶ್ವರ ಮಠದ ಅಭಿನವ ಮೃತ್ಯುಂಜಯ ಸ್ವಾಮೀಜಿ, ಖೇಳಗಿ ಶೀವಲಿಂಗೇಶ್ವರ ಮಠದ ಶಿವಲಿಂಗ ಸ್ವಾಮೀಜಿ, ಗುಳೆದಗುಡ್ಡ ಮುರಡಿಮಠದ ಅಭಿನವ ಕಾಡಸಿದ್ದೇಶ್ವರ ಸ್ವಾಮೀಜಿ, ಅಡವಿ ಅಮರೇಶ್ವರ ಮಠದ ತೋಂಟದಾರ್ಯ ಸ್ವಾಮೀಜಿ, ಹಗರಿಬೊಮ್ಮನ ಹಳ್ಳಿಯ ಶಾಸಕಿ ಲತಾ ಮಲ್ಲಿಕಾರ್ಜುನ, ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್, ಗದಗ ಜೆ.ಎಂ.ಎಫ್.ಸಿ. ನ್ಯಾಯಾಧೀಶೆ ಸುನಿತಾ ಡೊಳ್ಳಿನ ಪಾಲ್ಗೊಳ್ಳಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.