ADVERTISEMENT

ಎನ್‌ಎಸ್‌ಎಸ್ ವಿದ್ಯಾರ್ಥಿಗಳಿಗೆ ಪಿಎಂ ಸನ್ಮಾನ

​ಪ್ರಜಾವಾಣಿ ವಾರ್ತೆ
Published 9 ಆಗಸ್ಟ್ 2024, 15:53 IST
Last Updated 9 ಆಗಸ್ಟ್ 2024, 15:53 IST
ಸತೀಶ್ ಕನ್ನೇರ, ಆದಿತ್ಯ ಗೊರವರ
ಸತೀಶ್ ಕನ್ನೇರ, ಆದಿತ್ಯ ಗೊರವರ   

ಗದಗ: ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಿದ್ಯಾರ್ಥಿಗಳಾದ ಸತೀಶ್ ಕನ್ನೇರ ಹಾಗೂ ಆದಿತ್ಯ ಗೊರವರ ಆಗಸ್ಟ್‌ 15ರಂದು ದೆಹಲಿಯ ಕೆಂಪುಕೋಟೆಯಲ್ಲಿ ನಡೆಯುವ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಭಾಗವಹಿಸಿ, ಪ್ರಧಾನಿ ನರೇಂದ್ರ ಮೋದಿ ಅವರಿಂದ ಸನ್ಮಾನ ಸ್ವೀಕರಿಸುವ ಅವಕಾಶ ಪಡೆದುಕೊಂಡಿದ್ದಾರೆ.

‘ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ರಾಷ್ಟ್ರೀಯ ಭಾವೈಕ್ಯತೆ ಪ್ರಚುರಗೊಳಿಸುವ ನಿಟ್ಟಿನಲ್ಲಿ ಹಮ್ಮಿಕೊಳ್ಳಲಾದ ‘ಮೇರಿ ಮಾಟಿ, ಮೇರಾ ದೇಶ’ ಕಾರ್ಯಕ್ರಮದ ಮೂಲಕ  ದೇಶಪ್ರೇಮ ಭಾವನೆಯನ್ನು ಬೆಳೆಸುವಲ್ಲಿ ಈ ಕಾಲೇಜಿನ ಎನ್‌ಎಸ್‌ಎಸ್ ಘಟಕ ಯಶಸ್ವಿಯಾಗಿದೆ.

ವಿವಿಧ ಬಗೆಯ ಗಿಡಗಳನ್ನು ನೆಟ್ಟು ಪಾಲನೆ ಪೋಷಣೆ ಮಾಡುವ ‘ಅಮೃತ ವಾಟಿಕಾ’ ಕಾರ್ಯಕ್ರಮವನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿದೆ. ಅದೇರೀತಿ, ವೈವಿಧ್ಯಮಯ ಕಾರ್ಯಕ್ರಮಗಳ ಮೂಲಕ ಯುವಜನರಲ್ಲಿ ರಾಷ್ಟ್ರೀಯ ಸೇವಾ ಭಾವನೆಯನ್ನು ಬೆಳೆಸಿದ ಸಾಧನೆ ಪರಿಗಣಿಸಿ ಪ್ರಧಾನಮಂತ್ರಿಗಳಿಂದ ವಿಶೇಷ ಆತಿಥ್ಯ ಹಾಗೂ ಸನ್ಮಾನ ಸ್ವೀಕರಿಸುವ ಸುವರ್ಣಾವಕಾಶ ಈ ಇಬ್ಬರು ವಿದ್ಯಾರ್ಥಿಗಳಿಗೆ ಸಿಕ್ಕಿದೆ’ ಎಂದು ಎನ್‌ಎಸ್‌ಎಸ್ ಜಿಲ್ಲಾ ನೋಡಲ್ ಅಧಿಕಾರಿ ಶ್ರೀನಿವಾಸ ಬಡಿಗೇರ ತಿಳಿಸಿದ್ದಾರೆ.

ADVERTISEMENT

ಪ್ರಧಾನಿಯಿಂದ ಆತಿಥ್ಯ ಸ್ವೀಕರಿಸಿಲಿರುವ ವಿದ್ಯಾರ್ಥಿಗಳಿಗೆ ಕಾಲೇಜಿನ ಪ್ರಾಚಾರ್ಯರಾದ ಪೂರ್ಣಿಮಾ ಹೊಸಮನಿ, ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷರು ಹಾಗೂ ಸದಸ್ಯರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.