ಕೊಣ್ಣೂರು (ನರಗುಂದ): ಗ್ರಾಮೀಣ ಕೃಷಿ ಕಾರ್ಯಾನುಭವ ಶಿಬಿರದ ಅಡಿಯಲ್ಲಿ ನಡೆದ ವಿಚಾರ ಸಂಕಿರಣ ಹಾಗೂ ತಾಂತ್ರಿಕ ತರಬೇತಿ ಕಾರ್ಯಕ್ರಮದಲ್ಲಿ ಧಾರವಾಡದ ಕೃಷಿ ವಿಶ್ವವಿದ್ಯಾಲಯದ ಅಂತಿಮ ವರ್ಷದ ವಿದ್ಯಾರ್ಥಿಗಳು ವಾಸನ ಮತ್ತು ಬೆಳ್ಳೇರಿ ಗ್ರಾಮದ ಕೃಷಿ ಜಮೀನಿಗಳಿಗೆ ಭೇಟಿ ನೀಡಿ, ರೈತರು ಎದುರಿಸುತ್ತಿರುವ ಸಮಸ್ಯೆಗಳು ಮತ್ತು ಪರಿಹಾರಕ್ರಮಗಳ ಬಗ್ಗೆ ಅಧ್ಯಯನ ನಡೆಸಿದರು.
ಕೃಷಿ ಮಹಾವಿದ್ಯಾಲಯದ ಪ್ರಾಧ್ಯಾಪಕ ಐ.ಕೆ.ಕಾಳಪ್ಪನವರ ಕಾಯಕ್ರಮ ಉದ್ಘಾಟಿಸಿದರು.
ಕೃಷಿ ಅಧಿಕಾರಿ ಮಂಜುನಾಥ್ ಜನಮಟ್ಟಿ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ರುಕ್ಕವ್ವ ತಳವಾರ, ಗ್ರಾಮ ಲೆಕ್ಕಾಧಿಕಾರಿ ವಾಲಿ, ಕೊಣ್ಣೂರು ಕೃಷಿ ಸಂಶೋಧನಾ ಕೇಂದ್ರದ ಮುಖ್ಯಸ್ಥ ಡಾ. ನಾಗರಾಜ್, ಬಾಬಣ್ಣ ಹಿರೇಹೋಳಿ, ಬಿ.ಎಂ.ಮೆಣಸಗಿ. ಬಿ.ಆರ್.ಪಾಟೀಲ ಹಾಗೂ ರೈತರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.