ADVERTISEMENT

ಗದಗ | ವಕ್ಫ್‌ ಮಂಡಳಿಯ ಚುನಾವಣಾ ಪ್ರಚಾರ: 17 ಜಮಾತಿನ ಮುತ್ವವಲ್ಲಿಗಳ ಸಭೆ

​ಪ್ರಜಾವಾಣಿ ವಾರ್ತೆ
Published 18 ನವೆಂಬರ್ 2024, 15:28 IST
Last Updated 18 ನವೆಂಬರ್ 2024, 15:28 IST
ಮಾಜಿ ಸಚಿವ ಎ.ಎಂ.ಹಿಂಡಸಗೇರಿ ಹಾಗೂ ಮಾಜಿ ಶಾಸಕ ಡಿ.ಆರ್.ಪಾಟೀಲ ಕರ್ನಾಟಕ ರಾಜ್ಯ ವಕ್ಫ್‌ ಮಂಡಳಿಯ ಚುನಾವಣಾ ಪ್ರಚಾರ ಪತ್ರ ಪ್ರದರ್ಶಿಸಿದರು
ಮಾಜಿ ಸಚಿವ ಎ.ಎಂ.ಹಿಂಡಸಗೇರಿ ಹಾಗೂ ಮಾಜಿ ಶಾಸಕ ಡಿ.ಆರ್.ಪಾಟೀಲ ಕರ್ನಾಟಕ ರಾಜ್ಯ ವಕ್ಫ್‌ ಮಂಡಳಿಯ ಚುನಾವಣಾ ಪ್ರಚಾರ ಪತ್ರ ಪ್ರದರ್ಶಿಸಿದರು   

ಗದಗ: ಕರ್ನಾಟಕ ರಾಜ್ಯ ವಕ್ಫ್‌ ಮಂಡಳಿಯ ಚುನಾವಣಾ ಪ್ರಚಾರಾರ್ಥವಾಗಿ ಮಾಜಿ ಸಚಿವ ಎ.ಎಂ.ಹಿಂಡಸಗೇರಿ ಹಾಗೂ ಮಾಜಿ ಶಾಸಕ ಡಿ.ಆರ್.ಪಾಟೀಲ ಅವರ ನೇತೃತ್ವದಲ್ಲಿ ಜಿಲ್ಲೆಯ ಎಲ್ಲಾ 17 ಜಮಾತಿನ ಮುತ್ವವಲ್ಲಿಗಳ ಸಭೆ ನಡೆಯಿತು.

ನ.19ರಂದು ಬೆಳಗಾವಿಯ ಜಿಲ್ಲಾಧಿಕಾರಿ ಆವರಣದಲ್ಲಿ ಬೆಳಿಗ್ಗೆ 8ರಿಂದ ಸಂಜೆ 4ರವರೆಗೆ ಚುನಾವಣೆ ನಡೆಯಲಿದೆ. ಎಲ್ಲರೂ ಒಗ್ಗಟ್ಟಿನಿಂದ ಮತ ಚಲಾಯಿಸಬೇಕು ಎಂದು ಸಭೆಯಲ್ಲಿ ತೀರ್ಮಾನಿಸಲಾಯಿತು.

ಗದಗ ಜಿಲ್ಲಾ ವಕ್ಫ್‌ ಸಲಹಾ ಸಮಿತಿ ಚೇರ್‌ಮನ್‌ ಜಿ.ಎಂ.ದಂಡಿನ ಮಾತನಾಡಿ, ‘ಗದಗ ಜಿಲ್ಲೆಯ ಅಭಿವೃದ್ಧಿಗಾಗಿ ಅನ್ವರ್ ಬಾಷಾ ಹಾಗೂ ಸರ್ವರ್ ಬೇಗ್ ಅವರಿಗೆ ಮತ ಚಲಾಯಿಸುವಂತೆ ಮನವಿ ಮಾಡಿದರು. 

ADVERTISEMENT

ಮಾಜಿ ಶಾಸಕ ಡಿ.ಆರ್.ಪಾಟೀಲ ಅವರು ಸಹ ಎಲ್ಲರೂ ಒಗ್ಗಟ್ಟಾಗಿ ಮತ ಚಲಾಯಿಸಬೇಕು ಎಂದು ಕೇಳಿಕೊಂಡರು.

ಎಲ್ಲಾ ಮತದಾರರು ಭಾಗವಹಿಸಿದ್ದಕ್ಕಾಗಿ ಎಂ.ಸಿ.ಶೇಖ್‌ ಅವರು ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.