ADVERTISEMENT

ಗಜೇಂದ್ರಗಡ: ಯುವ ಸಮೂಹ ರಾಷ್ಟ್ರದ ಸಂಪತ್ತು

ಭೂಮರಡ್ಡಿ ಕಾಲೇಜು: ವಿವಿಧ ಚಟುವಟಿಕೆಗಳ ಉದ್ಘಾಟನೆ

​ಪ್ರಜಾವಾಣಿ ವಾರ್ತೆ
Published 20 ಅಕ್ಟೋಬರ್ 2024, 16:14 IST
Last Updated 20 ಅಕ್ಟೋಬರ್ 2024, 16:14 IST
ಗಜೇಂದ್ರಗಡದ ಎಸ್.ಎಂ.ಭೂಮರಡ್ಡಿ ಪದವಿ ಕಾಲೇಜಿನಲ್ಲಿ ನಡೆದ ಬಿ.ಎ ಹಾಗೂ ಬಿ.ಕಾಂ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮವನ್ನು ಸೂಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಶರಣು ಗಾಣಿಗೇರ ಉದ್ಘಾಟಿಸಿದರು
ಗಜೇಂದ್ರಗಡದ ಎಸ್.ಎಂ.ಭೂಮರಡ್ಡಿ ಪದವಿ ಕಾಲೇಜಿನಲ್ಲಿ ನಡೆದ ಬಿ.ಎ ಹಾಗೂ ಬಿ.ಕಾಂ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮವನ್ನು ಸೂಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಶರಣು ಗಾಣಿಗೇರ ಉದ್ಘಾಟಿಸಿದರು   

ಗಜೇಂದ್ರಗಡ: ಪಟ್ಟಣದ ಎಸ್.ಎಂ.ಭೂಮರಡ್ಡಿ ಪದವಿ ಕಾಲೇಜಿನಲ್ಲಿ ಶುಕ್ರವಾರ ಬಿ.ಎ ಹಾಗೂ ಬಿ.ಕಾಂ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಹಾಗೂ ಸಂಗೀತ, ಸಾಂಸ್ಕೃತಿಕ, ಎನ್.ಎಸ್‌.ಎಸ್‌. ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸೂಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಶರಣು ಗಾಣಿಗೇರ, ‘ಆರೋಗ್ಯವಂತ ಯುವ ಸಮೂಹವೇ ನಮ್ಮ ರಾಷ್ಟ್ರದ ನಿಜವಾದ ಸಂಪತ್ತು. ಹೀಗಾಗಿ ವಿದ್ಯಾರ್ಥಿಗಳು ಕೆಟ್ಟ ಚಟಗಳಿಗೆ, ಆಮಿಷಗಳಿಗೆ ಬಲಿಯಾಗದೆ ಉತ್ತಮ ಶಿಕ್ಷಣ ಪಡೆದು ಭವಿಷ್ಯದಲ್ಲಿ ರಾಷ್ಟ್ರದ ನಾಯಕರಾಗಬೇಕು’ ಎಂದು ಸಲಹೆ ನೀಡಿದರು.

‘ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಪ್ರತಿಭಾವಂತರು ಆಗಿರುವುದರ ಜೊತೆಗೆ ದೈಹಿಕ ಮತ್ತು ಮಾನಸಿಕವಾಗಿ ಸದೃಢರಾಗಿರುತ್ತಾರೆ. ವಿದ್ಯಾರ್ಥಿಗಳು ಪದವಿಹಂತದಲ್ಲಿ ಓದುವ ಹವ್ಯಾಸ ಬೆಳೆಸಿಕೊಂಡರೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಸಮರ್ಥವಾಗಿ ಎದುರಿಸಿ ಉನ್ನತಮಟ್ಟದ ಅಧಿಕಾರಿಗಳಾಗಿ ಉತ್ತಮ ಬದುಕು ರೂಪಿಸಿಕೊಳ್ಳಬಹುದು’ ಎಂದರು.

ADVERTISEMENT

ಉಪನ್ಯಾಸಕ ಬಿ.ವಿ.ಮುನವಳ್ಳಿ ಮಾತನಾಡಿ, ‘ಗಜೇಂದ್ರಗಡ ವಿದ್ಯಾವರ್ಧಕ ಸಂಸ್ಥೆಯ ಎಸ್.ಎಂ.ಭೂಮರಡ್ಡಿ ಪದವಿ ಕಾಲೇಜು ಹಲವು ವರ್ಷಗಳಿಂದ ಈ ಭಾಗದ ಗ್ರಾಮೀಣ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಸಹಕಾರಿಯಾಗಿದ್ದು, ಈ ಕಾಲೇಜಿನಲ್ಲಿ ಕಲಿತ ಹಲವಾರು ವಿದ್ಯಾರ್ಥಿಗಳು ಉನ್ನತ ಹುದ್ದೆಗಳನ್ನು ಅಲಂಕರಿಸಿದ್ದಾರೆ. ಅಲ್ಲದೆ ನಮ್ಮ ಕಾಲೇಜಿನ ವಿದ್ಯಾರ್ಥಿಗಳು ವಿಶ್ವವಿದ್ಯಾಲಯ ಮಟ್ಟಕ್ಕೆ ಆಯ್ಕೆಯಾಗುವ ಮೂಲಕ ಕ್ರೀಡೆಗಳಲ್ಲಿ ಸಾಧನೆ ಮಾಡುತ್ತಿದ್ದಾರೆ ಎಂದರು.

ಪ್ರಾಚಾರ್ಯ ಡಾ.ಎಸ್.ಎನ್.ಶಿವರಡ್ಡಿ ಅಧ್ಯಕ್ಷತೆ ವಹಿಸಿದ್ದರು. ‌

ಉಪನ್ಯಾಸಕರಾದ ಎಸ್.ಎಸ್.ಚುಂಚಾ, ಡಾ.ಎಸ್.ಹೆಚ್.ಪವಾರ, ಎಲ್.ಕೆ.ವದ್ನಾಳ, ಎಲ್.ಕೆ.ಹಿರೇಮಠ, ಎಸ್.ಕೆ.ಕಟ್ಟಿಮನಿ, ಎಂ.ಎಲ್.ಕ್ವಾಟಿ, ಎಸ್.ವಿ.ಪತ್ತಾರ, ಮಹಾದೇವಿ ವಕ್ರಾಣಿ, ಯು.ಎಸ್.ತಿಮ್ಮನಗೌಡ, ಎಸ್.ಆರ್.ರಜಪೂತ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.