ಹಾಸನ: ಜಿಲ್ಲೆಯಲ್ಲಿ ಸುಮಾರು 4,40,506 ಪಡಿತರ ಚೀಟಿಗಳಿದ್ದು, ಇದರಲ್ಲಿ 3,925 ಬಿಪಿಎಲ್ ಪಡಿತರ ಚೀಟಿಗಳನ್ನು ಎಪಿಎಲ್‌ಗೆ ಬದಲಾಯಿಸಲಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಜಂಟಿ ನಿರ್ದೇಶಕ ಬಿ. ಅರುಣ್ ಕುಮಾರ್ ಸಂಗಾವಿ ತಿಳಿಸಿದರು.
ನಗರದ ತಮ್ಮ ಕಚೇರಿಯಲ್ಲಿ ಶನಿವಾರ ಸುದ್ದಿಗಾರರಿಗೆ ಮಾಹಿತಿ ನೀಡಿದ ಅವರು, ಜಿಲ್ಲೆಯಲ್ಲಿ ಸುಮಾರು 4,40,506 ಪಡಿತರ ಚೀಟಿಯಲ್ಲಿ 23,068 ಅಂತ್ಯೋದಯ, 4,16,438 ಬಿಪಿಎಲ್ ಪಡಿತರ ಚೀಟಿಗಳಿವೆ. ಇದರಲ್ಲಿ ಮರಣ ಹೊಂದಿರುವವರು, ವಾಣಿಜ್ಯ ತೆರಿಗೆ ಪಾವತಿದಾರರು, ಸರ್ಕಾರಿ ನೌಕರಿ ಹೊಂದಿರುವವರ ಮಾಹಿತಿಯನ್ನು ಇ-ಗವರ್ನೆನ್ಸ್ ಮತ್ತು ಆಯುಕ್ತರ ಕಚೇರಿ ಮೂಲಕ ಪಡೆದು, 3925 ಬಿಪಿಎಲ್ ಕಾರ್ಡ್‌ಗಳನ್ನು ಎಪಿಎಲ್‌ಗೆ ಬದಲಾಯಿಸಲಾಗಿದೆ ಎಂದರು.
ಜಿಲ್ಲೆಯಲ್ಲಿ 599 ಕಾರ್ಡ್‌ಗಳಲ್ಲಿ ಮೃತ ಮೃತಪಟ್ಟವರ ಹೆಸರನ್ನು ತೆಗೆಯಲಾಗಿದೆ. ಸತತವಾಗಿ ಆರು ತಿಂಗಳು ಪಡಿತರ ಪಡೆಯದ 9,505 ಕಾರ್ಡ್‌ಗಳನ್ನು ಅಮಾನತಿನಲ್ಲಿ ಇಡಲಾಗಿದೆ. ಆಯಾ ತಾಲ್ಲೂಕು ತಹಶೀಲ್ದಾರರು ತನಿಖೆ ನಡೆಸಿ, ವರದಿ ನೀಡಿದ ಬಳಿಕ ಈ ಕಾರ್ಡ್‌ಗಳಿಗೆ ಮರು ಚಾಲನೆ ನೀಡಲಾಗುವುದು ಎಂದರು.
ಜಿಲ್ಲೆಯಲ್ಲಿ ಸರ್ಕಾರಿ ನೌಕರರು ಹೊಂದಿದ್ದ 102 ಬಿಪಿಎಲ್ ಕಾರ್ಡ್‌ಗಳನ್ನು ಎಪಿಎಲ್‌ಗೆ ಬದಲಾಯಿಸಲಾಗಿದೆ. ವಾಣಿಜ್ಯ ತೆರಿಗೆ ಪಾವತಿ ಮಾಡುತ್ತಿರುವ ಸುಮಾರು 3,408 ಕಾರ್ಡ್, ₹1.20 ಲಕ್ಷ ವಾರ್ಷಿಕ ವರಮಾನ ಇರುವ 415 ಕಾರ್ಡ್‌ಗಳನ್ನು ಎಪಿಎಲ್‌ಗೆ ಬದಲಾಯಿಸಲಾಗಿದೆ ಎಂದು ವಿವರಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.