ಹಾಸನ: ಜಿಲ್ಲೆಯಲ್ಲಿ ಪ್ರತಿ ವರ್ಷ ಹೊಯ್ಸಳ ಉತ್ಸವ ಆಚರಿಸುವ ಕುರಿತು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳೊಂದಿಗೆ ಮಾಹಿತಿ ಪಡೆದಿದ್ದೇನೆ. ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ ಚರ್ಚಿಸಿ, ಹೊಯ್ಸಳೋತ್ಸವವನ್ನು ಆಚರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಭರವಸೆ ನೀಡಿದರು.
ಹಾಸನಾಂಬ ದರ್ಶನ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾಯಿಯ ದರ್ಶನ ಪಡೆದು ಖುಷಿಯಾಗಿದೆ. ರಾಜ್ಯದ ಜನರಿಗೆ, ರೈತರಿಗೆ ಸುಭಿಕ್ಷ ತರಲಿ. ಉತ್ತಮ ಮಳೆಯೊಂದಿಗೆ ಸಮೃದ್ಧಿಯನ್ನು ಉಂಟುಮಾಡಲಿ ಎಂದು ಬೇಡಿರುವುದಾಗಿ ಹೇಳಿದರು.
ಈ ಬಾರಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ಸಾಮಾಜಿಕ ನ್ಯಾಯದಡಿ ವಿತರಣೆ ಮಾಡಲಾಗಿದೆ. ಹಾಸನ ಜಿಲ್ಲೆಯ ಮೂರು ಮಂದಿಗೆ ಪ್ರಶಸ್ತಿ ದೊರಕಿದ್ದು, ಯಾವುದೇ ನ್ಯೂನತೆಗಳು ಎದುರಾಗದಂತೆ ರಾಜ್ಯದ ಪ್ರತಿ ಜಿಲ್ಲೆಯ ಅರ್ಹ ಮಹನೀಯರಿಗೆ ಆಯ್ಕೆ ಸಮಿತಿಯ ಶಿಫಾರಸಿನಂತೆ ಪ್ರಶಸ್ತಿ ವಿತರಿಸಲಾಗಿದೆ. ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಸಹ ಪಾರದರ್ಶಕ ಆಯ್ಕೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದರು.
ರಾಜ್ಯದ 30 ಜಿಲ್ಲೆಗಳಲ್ಲಿಯೂ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಹಲ್ಮಿಡಿ ಶಾಸನ ಅನಾವರಣ ಮಾಡಬೇಕು. ಗೌರವ ಸಲ್ಲಿಸಿ, ಕನ್ನಡ ರಾಜ್ಯೋತ್ಸವ ಆಚರಣೆಗೆ ಸೂಚನೆ ನೀಡಿರುವುದಾಗಿ ತಂಗಡಗಿ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.