ಅರಕಲಗೂಡು: ‘ತಾಲ್ಲೂಕಿನ ವಿದ್ಯಾರ್ಥಿಗಳು ಕ್ರೀಡಾ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡುತ್ತಿರುವುದು ಹೆಮ್ಮೆಯ ಸಂಗತಿ’ ಎಂದು ಬಿಇಒ ಕೆ.ಪಿ. ನಾರಾಯಣ್ ಹೇಳಿದರು.
ಪಟ್ಟಣದಲ್ಲಿ ಗುರುವಾರ ರಾಜ್ಯಮಟ್ಟದ ಟ್ರಿಪಲ್ ಜಂಪ್ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ತಾಲ್ಲೂಕಿನ ಮೋಕಲಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ಎಂ.ಯು. ನಿಶಾನ್ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದರು.
‘ಈ ಬಾರಿ ವಿವಿಧ ಕ್ರೀಡೆಗಳಲ್ಲಿ ತಾಲ್ಲೂಕಿನ 60 ಮಕ್ಕಳು ರಾಜ್ಯಮಟ್ಟದ ಹಾಗೂ ಹಾಗೂ 20 ಮಕ್ಕಳು ರಾಷ್ಟ್ರ ಮಟ್ಟದ ಸ್ಫರ್ಧೆಗಳಿಗೆ ಆಯ್ಕೆಯಾಗುವ ಮೂಲಕ ಉತ್ತಮ ಸಾಧನೆ ಮೆರೆದಿದ್ದಾರೆ. ಶಿಕ್ಷಣದೊಂದಿಗೆ ಕ್ರೀಡೆಯಲ್ಲೂ ಛಾಪು ಮೂಡಿಸುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ. ರಾಷ್ಟ್ರಮಟ್ಟದ ಸ್ಪರ್ಧೆಗೆ ತೆರಳುತ್ತಿರುವ ನಿಶಾನ್ ಜಯಗಳಿಸಿ ರಾಜ್ಯ ಹಾಗೂ ತಾಲ್ಲೂಕಿಗೆ ಕೀರ್ತಿ ತರಲಿ’ ಎಂದು ಹಾರೈಸಿದರು.
ದೈಹಿಕ ಶಿಕ್ಷಣ ಪರಿವೀಕ್ಷಕ ನಿಂಗಯ್ಯ, ತಾಲ್ಲೂಕು ಪ್ರಾಥಮಿಕ ಶಾಲಾಶಿಕ್ಷಕರ ಸಂಘದ ಅಧ್ಯಕ್ಷೆ ಸರಸ್ವತಿ, ಶಿಕ್ಷರಾದ ಗೌತಮಿ, ಪುರುಷೋತ್ತಮ, ರೇವಣ್ಣ, ಹರೀಶ್, ಬೀರಲಿಂಗಪ್ಪ, ಸರಸ್ವತಿ, ಮಲ್ಲಿಕಾರ್ಜುನ, ಜಗದೀಶ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.