ಅರಕಲಗೂಡು: ‘ಗರ್ಭಾವಸ್ಥೆ ಪ್ರಮುಖ ಘಟ್ಟವಾಗಿದ್ದು, ತಾಯಿ ಮತ್ತು ಮಗುವಿನ ಆರೋಗ್ಯ ಕುರಿತು ಹೆಚ್ಚಿನ ಕಾಳಜಿ ಅಗತ್ಯ’ ಎಂದು ತಾಲ್ಲೂಕು ವೈದ್ಯಾಧಿಕಾರಿ ಡಾ. ಪುಷ್ಪಲತಾ ತಿಳಿಸಿದರು.
ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಮಂಗಳವಾರ ಏರ್ಪಡಿಸಿದ್ದ ಸಾಮೂಹಿಕ ಸೀಮಂತಕ್ಕೆ ಚಾಲನೆ ನೀಡಿ ಅವರು ಅವರು ಮಾತನಾಡಿದರು.
ನಿಗದಿತ ಸಮಯಕ್ಕೆ ವಿವಿಧ ಪರೀಕ್ಷೆ ಹಾಗೂ ಚುಚ್ಚುಮದ್ದುಗಳನ್ನು ಪಡೆಯುವ ಜತೆಗೆ ಪೌಷ್ಠಿಕ ಆಹಾರ ಸೇವಿಸುವುದರಿಂದ ಹೆರಿಗೆ ಕಾರ್ಯ ಸುಲಭವಾಗುವುದಲ್ಲದೆ, ತಾಯಿ ಮತ್ತು ಹುಟ್ಟಲಿರುವ ಮಗುವಿನ ಆರೋಗ್ಯ ಉತ್ತಮವಾಗಿರುತ್ತದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಸರ್ಕಾರಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಸ್ವಾಮಿಗೌಡ ಮಾತನಾಡಿ, ಮಗು ಪಡೆಯುವ ಮುನ್ನ ಮಹಿಳೆ ತಾನು ಗರ್ಭ ಧರಿಸಲು ಸೂಕ್ತವಾಗಿದ್ದೇನೆಯೇ ಎಂಬ ಕುರಿತು ವೈದ್ಯರ ಸಲಹೆ ಪಡೆಯುವುದು ಅಗತ್ಯ’ ಎಂದರು.
41 ಮಂದಿ ಗರ್ಭಿಣಿ ಮಹಿಳೆಯರಿಗೆ ಸೀಮಂತ ಕಾರ್ಯ ನಡೆಸಿ ಆರೋಗ್ಯ ಸಲಹೆ ನೀಡಲಾಯಿತು. ಡಾ. ರಮೀಜ್ , ಡಾ. ಪೂರ್ಣಿಮಾ ಮಾತನಾಡಿದರು. ಡಾ. ವಾಸ್ತವಿ, ಲೀಲಾವತಿ, ಪರಶುರಾಮ್, ಪರಮೇಶ್, ಗೌರಮ್ಮ, ಪ್ರಕಾಶ್ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.