ADVERTISEMENT

ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ

​ಪ್ರಜಾವಾಣಿ ವಾರ್ತೆ
Published 14 ನವೆಂಬರ್ 2024, 13:53 IST
Last Updated 14 ನವೆಂಬರ್ 2024, 13:53 IST
ಅರಸೀಕೆರೆ ತಾಲ್ಲೂಕಿನ ಬಾಗಿಲಘಟ್ಟದಿಂದ ಜೋಯಿಸರಕೊಪ್ಪಲಿನವರೆಗೆ ಎತ್ತಿನಹೊಳೆ ಯೋಜನೆಯಡಿ ₹50 ಲಕ್ಷ ವೆಚ್ಚದ ಸಿ.ಸಿ.ರಸ್ತೆ ನಿರ್ಮಾಣ ಕಾಮಗಾರಿಗೆ ಗುರುವಾರ ಚಿಕ್ಕಣ್ಣನಕೊಪ್ಪಲು ಗ್ರಾಮದಲ್ಲಿ ಶಾಸಕ ಕೆ.ಎಂ.ಶಿವಲಿಂಗೇಗೌಡ ಭೂಮಿ ಪೂಜೆ ನೆರವೇರಿಸಿದರು
ಅರಸೀಕೆರೆ ತಾಲ್ಲೂಕಿನ ಬಾಗಿಲಘಟ್ಟದಿಂದ ಜೋಯಿಸರಕೊಪ್ಪಲಿನವರೆಗೆ ಎತ್ತಿನಹೊಳೆ ಯೋಜನೆಯಡಿ ₹50 ಲಕ್ಷ ವೆಚ್ಚದ ಸಿ.ಸಿ.ರಸ್ತೆ ನಿರ್ಮಾಣ ಕಾಮಗಾರಿಗೆ ಗುರುವಾರ ಚಿಕ್ಕಣ್ಣನಕೊಪ್ಪಲು ಗ್ರಾಮದಲ್ಲಿ ಶಾಸಕ ಕೆ.ಎಂ.ಶಿವಲಿಂಗೇಗೌಡ ಭೂಮಿ ಪೂಜೆ ನೆರವೇರಿಸಿದರು   

ಅರಸೀಕೆರೆ: ತಾಲ್ಲೂಕಿನ ಬಾಗಿಲಘಟ್ಟದಿಂದ ಜೋಯಿಸರಕೊಪ್ಪಲಿನವರೆಗೆ ಎತ್ತಿನಹೊಳೆ ಯೋಜನೆಯಡಿ ₹50 ಲಕ್ಷ ವೆಚ್ಚದ ಸಿ.ಸಿ.ರಸ್ತೆ ನಿರ್ಮಾಣ ಕಾಮಗಾರಿಗೆ ಶಾಸಕ ಕೆ.ಎಂ.ಶಿವಲಿಂಗೇಗೌಡ ಗುರುವಾರ ಚಿಕ್ಕಣ್ಣನಕೊಪ್ಪಲು ಗ್ರಾಮದಲ್ಲಿ ಭೂಮಿ ಪೂಜೆ ನೆರವೇರಿಸಿದರು.

ನಂತರ ಮಾತನಾಡಿದ ಅವರು, ‘ಗ್ರಾಮೀಣ ಭಾಗಗಳಿಗೆ ಸಂಪರ್ಕ ಕಲ್ಪಿಸುವ ಉದ್ದೇಶದಿಂದ ಸುಗಮ ಸಂಚಾರ ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಈ ರಸ್ತೆ ನಿರ್ಮಿಸಲಾಗುತ್ತಿದೆ. ಬಾಣಾವರದಿಂದ ಚಿಕ್ಕಣ್ಣನಕೊಪ್ಪಲಿನವರಗೆ ರಸ್ತೆ ಹಾಳಾಗಿದ್ದು ರಸ್ತೆಗೆ ಟೆಂಡರ್ ಆಗಿದ್ದು ಕೆಲವೇ ದಿನಗಳಲ್ಲಿ ಕಾಮಗಾರಿ ಪ್ರಾರಂಭವಾಗಲಿದೆ’ ಎಂದರು.

ಗ್ರಾಮ ಪಂಚಾಯತಿ ಅಧ್ಯಕ್ಷೆ ಭಾಗ್ಯಮ್ಮ ಮಾತನಾಡಿ,‘ಶಾಸಕರ ಅವಿರತ ಶ್ರಮದಿಂದ ಇಂದು ತಾಲ್ಲೂಕಿನಲ್ಲಿ ಹಂತ ಹಂತವಾಗಿ ಎಲ್ಲಾ ಕ್ಷೇತ್ರಗಳಲ್ಲಿ ಅಭಿವೃದ್ದಿ ಹೊಂದುತ್ತಿದೆ. ಇವರ ಸಹಕಾರದಿಂದ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಎಲ್ಲ ಹಳ್ಳಿಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಿದ್ದಾರೆ’ ಎಂದು ಹೇಳಿದರು.

ADVERTISEMENT

ಗ್ರಾಮಪಂಚಾಯಿತಿ ಸದಸ್ಯರಾದ ಬಸವರಾಜು, ಮಹೇಶಪ್ಪ, ಶಿವಕುಮಾರ್, ದೇವರಾಜು, ಸಂಪತ್, ಮುಖಂಡರಾದ ಬಾಣಾವರ ಜಯಣ್ಣ, ಸುರೇಶ, ಮಹಂತೇಶ, ಶಿವಶಂಕರ್, ಶ್ಯಾನೆಗೆರೆ ಗ್ರಾ.ಪಂ.ಅಧ್ಯಕ್ಷ ಮಂಜಪ್ಪ, ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಇಂದುಕುಮಾರ್, ಪಿ.ಡಿ.ಓ ಕೊಟ್ರಪ್ಪ, ಹಾಗೂ ಗ್ರಾಮಸ್ಥರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.