ADVERTISEMENT

ಶಿರಾಡಿ ಘಾಟ್‌ನಲ್ಲಿ ಕಾರು ಅಪಘಾತ: ಇಬ್ಬರು ಸಾವು

​ಪ್ರಜಾವಾಣಿ ವಾರ್ತೆ
Published 21 ಮೇ 2024, 13:39 IST
Last Updated 21 ಮೇ 2024, 13:39 IST
ಸಕಲೇಶಪುರ ತಾಲ್ಲೂಕು ಶಿರಾಡಿ ಘಾಟ್‌ನಲ್ಲಿ ಸಂಭವಿಸಿದ ಅಪಘಾತದಲ್ಲಿ ಕಾರು ನಜ್ಜುಗುಜ್ಜಾಗಿರುವುದು
ಸಕಲೇಶಪುರ ತಾಲ್ಲೂಕು ಶಿರಾಡಿ ಘಾಟ್‌ನಲ್ಲಿ ಸಂಭವಿಸಿದ ಅಪಘಾತದಲ್ಲಿ ಕಾರು ನಜ್ಜುಗುಜ್ಜಾಗಿರುವುದು   

ಸಕಲೇಶಪುರ: ಶಿರಾಡಿಘಾಟ್‌ನಲ್ಲಿ ಮಂಗಳವಾರ ಬೆಳಗಿನ ಜಾವ ಇನೋವಾ ಕಾರು ಹಾಗೂ ಕಂಟೇನರ್ ಮುಖಾಮುಖಿ ಡಿಕ್ಕಿಯಾಗಿ ತಾಯಿ -ಮಗ ಸ್ಥಳದಲ್ಲೇ ಮೃತಪಟ್ಟು, ನಾಲ್ವರು ಗ‌ಂಭೀರವಾಗಿ ಗಾಯಗೊಂಡಿದ್ದಾರೆ.

ತಾಲ್ಲೂಕಿನ ಶಿರಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿ 75ರ ಕೆಂಪುಹೊಳೆ ಸಮೀಪ ಸಂಭವಿಸಿದ ಅವಘಡದಲ್ಲಿ ಕಾರಿನಲ್ಲಿದ್ದ ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನ ಶಫೀಕ್ (20), ಸಫಿಯಾ (50) ಮೃತಪಟ್ಟಿದ್ದು, ಗಾಯಗೊಂಡ ನಾಲ್ವರನ್ನು ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ಕಳುಹಿಸಲಾಗಿದೆ.

ಮಂಗಳೂರಿನಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಕಂಟೇನರ್, ಬೆಂಗಳೂರಿನಿಂದ ಮಂಗಳೂರು ಕಡೆಗೆ ಇನೋವಾ ಕಾರು ಸಂಚರಿಸುತ್ತಿದ್ದವು.

ADVERTISEMENT

ಸಕಲೇಶಪುರ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳ ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.