ADVERTISEMENT

ಕೇಂದ್ರ ಸರ್ಕಾರದ ಮಲತಾಯಿ ಧೋರಣೆ: ಶಿವಲಿಂಗೇಗೌಡ

​ಪ್ರಜಾವಾಣಿ ವಾರ್ತೆ
Published 3 ಫೆಬ್ರುವರಿ 2024, 14:14 IST
Last Updated 3 ಫೆಬ್ರುವರಿ 2024, 14:14 IST
ಬಾಚೇನಹಳ್ಳಿ –ದೊಡ್ಡೇನಹಳ್ಳಿ ರಸ್ತೆ ಕಾಮಗಾರಿಗೆ ಶಾಸಕ ಕೆ.ಎಂ. ಶಿವಲಿಂಗೇಗೌಡ ಚಾಲನೆ ನೀಡಿದರು
ಬಾಚೇನಹಳ್ಳಿ –ದೊಡ್ಡೇನಹಳ್ಳಿ ರಸ್ತೆ ಕಾಮಗಾರಿಗೆ ಶಾಸಕ ಕೆ.ಎಂ. ಶಿವಲಿಂಗೇಗೌಡ ಚಾಲನೆ ನೀಡಿದರು   

ಅರಸೀಕೆರೆ: ರಾಜ್ಯದಲ್ಲಿ ಬರವಿದ್ದರೂ ಕೇಂದ್ರ ಸರ್ಕಾರ ಸ್ಪಂದಿಸದೇ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಗೃಹ ಮಂಡಳಿ ಅಧ್ಯಕ್ಷ ಕೆ .ಎಂ. ಶಿವಲಿಂಗೇಗೌಡ ಆರೋಪಿಸಿದರು.

₹1 ಕೋಟಿ ವೆಚ್ಚದ ತಾಲ್ಲೂಕಿನ ಬಾಚೇನಹಳ್ಳಿ –ದೊಡ್ಡೇನಹಳ್ಳಿ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ಮಾಡಿ  ಮಾತನಾಡಿದರು.

ಬರ ಪರಿಹಾರ ನೀಡದ ಕೇಂದ್ರ ಸರ್ಕಾರ ಅನ್ಯಾಯ ಮಾಡುತ್ತಿದೆ. ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಮನೆ ಬಾಗಿಲಿಗೆ ಸೇವೆಗಳನ್ನು ನೀಡುತ್ತಿದೆ ಎಂದು ಹೇಳಿದರು.

ADVERTISEMENT

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಹೆಚ್ಚಿನ ಮತ ನೀಡಬೇಕು. ಕ್ಷೇತ್ರದ ಅಭಿವೃದ್ಧಿಗೆ ಇದು ಸಹಕಾರಿಯಾಗಲಿದೆ ಎಂದರು.

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಪಟೇಲ್ ಶಿವಪ್ಪ ಮಾತನಾಡಿ, ಕ್ಷೇತ್ರದಲ್ಲಿ ಶಾಸಕರು ಮೂಲ ಸೌಲಭ್ಯಗಳನ್ನು ಒದಗಿಸಿ ಜನಪರ ಕಾರ್ಯಗಳನ್ನು ನಿರ್ವಹಿಸುತ್ತಿದ್ದಾರೆ ಎಂದು ಹೇಳಿದರು.

ಮುಖಂಡರಾದ ಹುಚ್ಚೇಗೌಡ, ಗ್ರಾ.ಪಂ ಅಧ್ಯಕ್ಷ ನಾಗೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕುಶಾಲ್ ಕುಮಾರ್,  ರಾಮಚಂದ್ರು, ಆಗ್ರೋ ಬಾಬು, ಚೀಲನಹಳ್ಳಿ ರಂಗಸ್ವಾಮಿ, ಕೋಟಿ ಪ್ರದಿ, ಎ.ಇ.ಇ. ಮುನಿರಾಜು ಹಾಗೂ ಗ್ರಾಮಸ್ಥರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.