ಚನ್ನರಾಯಪಟ್ಟಣ: ಸರ್ಕಾರದ ಯೋಜನೆಯನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಲು ಪಾರದರ್ಶಕವಾಗಿ ಆಯ್ಕೆ ಮಾಡಲಾಗುತ್ತಿದೆ ಎಂದು ಶಾಸಕ ಸಿ.ಎನ್. ಬಾಲಕೃಷ್ಣ ಹೇಳಿದರು.
ತಾಲ್ಲೂಕು ಪಂಚಾಯಿತಿ ಆವರಣದಲ್ಲಿ ಗುರುವಾರ ಜಿಲ್ಲಾ ಔದ್ಯಮಿಕ ಕೇಂದ್ರ ಯೋಜನೆ ಮತ್ತು ವೃತ್ತಿ ಪರ ಕುಶಲಕರ್ಮಿಗಳ ಸುಧಾರಿತ ಉಪಕರಣಗಳ ವಿತರಣೆ ಯೋಜನೆಯಡಿ 80 ಫಲಾನುಭವಿಗಳಿಗೆ ಪರಿಕರಗಳನ್ನು ವಿತರಿಸಿ ಅವರು ಮಾತನಾಡಿದರು.
200ಕ್ಕೂ ಹೆಚ್ಚು ಫಲಾನುಭವಿಗಳು ಅರ್ಜಿಸಲ್ಲಿಸಿದ್ದರು. ಲಾಟರಿ ಎತ್ತುವ ಮೂಲಕ 80 ಫಲಾನುಭವಿಗಳನ್ನು ಆಯ್ಕೆ ಮಾಡಲಾಗಿದೆ. ಅಂದಾಜು ₹ 10 ಲಕ್ಷಮೌಲ್ಯದ ಪರಿಕರಗಳನ್ನು ವಿತರಿಸಲಾಗಿದೆ. ಟೈಲರಿಂಗ್, ಮರಗೆಲಸ, ಗಾರೆಕೆಲಸ, ಎಲೆಕ್ಟ್ರಿಕಲ್ ದುರಸ್ತಿ, ಬೋರ್‌ವೆಲ್ ದುರಸ್ತಿ ಉಪಕರಣಗಳನ್ನು ವಿತರಿಸಲಾಗಿದೆ. ಫಲಾನುಭವಿಗಗಳ ಆರ್ಥಿಕಮಟ್ಟ ಸುಧಾರಿಸುತ್ತದೆ ಎಂದರು.
ಜಿಲ್ಲಾ ಔಧ್ಯಮಿಕ ಕೇಂದ್ರ ಯೋಜನೆಯಡಿ ವಿದ್ಯುತ್ ಚಾಲಿತ ಹೊಲಿಗೆಯಂತ್ರ, ವೃತ್ತಿಪರ ಕುಶಲಕರ್ಮಿಗಳಿಗೆ ಸುಧಾರಿತ ಉಪಕರಣಕ್ಕಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹರು ಅರ್ಜಿಸಲ್ಲಿಸಬಹುದು. ಕೃಷಿ ಇಲಾಖೆಯಿಂದ 700 ರೈತರಿಗೆ ಹನಿ ನೀರಾವರಿ ಸೆಟ್‍ಗಳನ್ನು ವಿತರಿಸಲಾಗಿದೆ ಎಂದು ಹೇಳಿದರು. ಸಣ್ಣಕೈಗಾರಿಕೆ ವಿಸ್ತರಣಾಧಿಕಾರಿ ಆನಂದ್ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.