ADVERTISEMENT

ಲಲಿತಾಸಹಸ್ರನಾಮ ಪಾರಾಯಣ

​ಪ್ರಜಾವಾಣಿ ವಾರ್ತೆ
Published 18 ಅಕ್ಟೋಬರ್ 2024, 16:29 IST
Last Updated 18 ಅಕ್ಟೋಬರ್ 2024, 16:29 IST
ಚನ್ನರಾಯಪಟ್ಟಣ ತಾಲ್ಲೂಕು ಶ್ರೀಕ್ಷೇತ್ರ ಕುಂದೂರು ಆದಿಚುಂಚನಗಿರಿ ಮಠದಲ್ಲಿ ಗುರುತೋರಿದ ದಾರಿ ತಿಂಗಳ ಮಾಮನ ತೇರು ಹುಣ್ಣಿಮೆ ಕಾರ್ಯಕ್ರಮದಲ್ಲಿ ಮಹಿಳೆಯರಿಂದ ಗುರುವಾರ ಲಲಿತಾಸಹಸ್ರನಾಮ ಪಾರಾಯಣ ಜರುಗಿತು
ಚನ್ನರಾಯಪಟ್ಟಣ ತಾಲ್ಲೂಕು ಶ್ರೀಕ್ಷೇತ್ರ ಕುಂದೂರು ಆದಿಚುಂಚನಗಿರಿ ಮಠದಲ್ಲಿ ಗುರುತೋರಿದ ದಾರಿ ತಿಂಗಳ ಮಾಮನ ತೇರು ಹುಣ್ಣಿಮೆ ಕಾರ್ಯಕ್ರಮದಲ್ಲಿ ಮಹಿಳೆಯರಿಂದ ಗುರುವಾರ ಲಲಿತಾಸಹಸ್ರನಾಮ ಪಾರಾಯಣ ಜರುಗಿತು   


ಚನ್ನರಾಯಪಟ್ಟಣ: ದಂಡಿಗನಹಳ್ಳಿ ಹೋಬಳಿಯಲ್ಲಿರುವ ಶ್ರೀಕ್ಷೇತ್ರ ಕುಂದೂರು ಆದಿಚುಂಚನಗಿರಿ ಮಠದಲ್ಲಿ ‘ಗುರು ತೋರಿದದಾರಿ ತಿಂಗಳ ಮಾಮನ ತೇರು’ 121ನೇ ಹುಣ್ಣಿಮೆ ಕಾರ್ಯಕ್ರಮದ ಅಂಗವಾಗಿ 108 ಮಹಿಳೆಯರಿಂದ ಲಲಿತಾ ಸಹಸ್ರನಾಮ ಪಾರಾಯಣ ನೆರವೇರಿಸಲಾಯಿತು.

ಕ್ಷೇತ್ರದ ಆದಿಶಕ್ತಿ ಮೆಳೆಯಮ್ಮ ದೇವಿಯ ದೇಗುಲದಲ್ಲಿ ಗುರುವಾರ ಆಯೋಜಿಸಿದ್ದ ಲಲಿತಾ ಸಹಸ್ರನಾಮ ಪಾರಾಯಣ ಕಾರ್ಯಕ್ರಮದ ಉದ್ಘಾಟನೆಯನ್ನು ಆದಿಚುಂಚನಗಿರಿ ಶಾಖಾಮಠದ ಶಂಭುನಾಥ ಸ್ವಾಮೀಜಿ ನೆರವೇರಿಸಿದರು.

ಬಾಲಗಂಗಾಧರನಾಥ ಸ್ವಾಮೀಜಿ, ಆದಿಶಕ್ತಿಮೆಳೆಯಮ್ಮ ದೇವಿ ಹಾಗೂ ರಾಮಯ್ಯ ಪರದೇಶಿ ಸ್ವಾಮೀಜಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.

ADVERTISEMENT

ಲಲಿತಾಸಹಸ್ರನಾಮ ಪಾರಾಯಣದ ಮಹತ್ವದ ಕುರಿತು ಮಂಗಳೂರಿನ ನಿರಂಜನ್ ಮಾತನಾಡಿದರು. ಕೈಲಾಸನಾಥ ಸ್ವಾಮೀಜಿ, ಕಬ್ಬಳಿಯ ಶಿವಪುತ್ರ ಸ್ವಾಮೀಜಿ, ಬೇಲೂರಿನ ತಹಶೀಲ್ದಾರ್ ಮಮತಾ ಪಾಲ್ಗೊಂಡಿದ್ದರು.

 ಕ್ಷೇತ್ರದಲ್ಲಿರುವ ದೇಗುಲವನ್ನು ತಳಿರು, ತೋರಣದಿಂದ ಸಿಂಗರಿಸಲಾಗಿತ್ತು. ವಿದ್ಯುದೀಪಾಲಂಕಾರ ಮಾಡಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.