ಹಾಸನ: ‘ಬಿಜೆಪಿ- ಜೆಡಿಎಸ್ ಮೈತ್ರಿಯಿಂದ ಕಾಂಗ್ರೆಸ್‌ಗೇ ಹೆಚ್ಚು ಲಾಭವಾಗಲಿದೆ. ಈಗ ರಾಜ್ಯದಲ್ಲಿ ಜಾತ್ಯತೀತ ಪಕ್ಷವಾಗಿ ಉಳಿದಿರುವುದು ಕಾಂಗ್ರೆಸ್ ಒಂದೇ’ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವ ಜಮೀರ್ ಅಹಮದ್ ಖಾನ್ ಪ್ರತಿಪಾದಿಸಿದರು.
ಅರಸೀಕೆರೆಯಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ರಾಜ್ಯದಲ್ಲಿ ಜನತಾದಳ ತನ್ನನ್ನು ಜಾತ್ಯತೀತ ಪಕ್ಷ ಎಂದು ಹೇಳಿಕೊಳ್ಳುತ್ತಿದ್ದುದರಿಂದ ಕಾಂಗ್ರೆಸ್‌ಗೆ ಸ್ವಲ್ಪ ಹೊಡೆತ ಬೀಳುತ್ತಿತ್ತು. ಈಗ ಆ ಸನ್ನಿವೇಶವಿಲ್ಲ’ ಎಂದರು.
‘ಜೆಡಿಎಸ್– ಬಿಜೆಪಿ ಮೈತ್ರಿ ಅವರ ತೀರ್ಮಾನ. ನಮಗೆ ಸಂಬಂಧವಿಲ್ಲ. ಎಚ್.ಡಿ.ದೇವೇಗೌಡರು ತಮ್ಮ ಪುತ್ರ ಎಚ್.ಡಿ.ಕುಮಾರಸ್ವಾಮಿ ಒತ್ತಡಕ್ಕೆ ಮಣಿದು, ಪಕ್ಷದ ರಾಜ್ಯ ಘಟಕದ ಅಧ್ಯಕ್ಷರನ್ನು ಹೊರಗಿಟ್ಟು ಮೈತ್ರಿ ಮಾಡಿಕೊಂಡಿದ್ದಾರೆ’ ಎಂದು ಟೀಕಿಸಿದರು.
‘ಮುಂದಿನ 15 ವರ್ಷ ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತ ಮುಂದುವರಿಯಲಿದೆ. ಜಾತ್ಯತೀತ ಮನೋಭಾವದ 60 ರಿಂದ 80 ಮಂದಿ ಕಾಂಗ್ರೆಸ್ ಸೇರಲು ನನ್ನೊಂದಿಗೆ ಮಾತಾಡಿದ್ದಾರೆ. ಮೈಸೂರು, ಚನ್ನಪಟ್ಟಣ, ಕೋಲಾರ, ಚಿಕ್ಕಬಳ್ಳಾಪುರ, ಹಾಸನದಿಂದಲೂ ಕರೆ ಮಾಡಿದ್ದಾರೆ. ಅರಮನೆ ಮೈದಾನದಲ್ಲಿ ದೊಡ್ಡ ಕಾರ್ಯಕ್ರಮ ಮಾಡಿ ಕಾಂಗ್ರೆಸ್‌ಗೆ ಸೇರಿಸಿಕೊಳ್ಳುತ್ತೇವೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.