ಆಲೂರು: ‘ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ವಾರ್ಡ್‌ಗಳಿಗೆ ಶುದ್ಧ ಕುಡಿಯುವ ನೀರನ್ನು ಒದಗಿಸಲು ಅಮೃತ ಯೋಜನೆಯಡಿ ₹5.17 ಕೋಟಿ ಅನುದಾನ ಬಿಡುಗಡೆಯಾಗಿದೆ’ ಎಂದು ಶಾಸಕ ಸಿಮೆಂಟ್ ಮಂಜು ತಿಳಿಸಿದರು.
ಪಟ್ಟಣದಲ್ಲಿ ನಡೆದ ಕುಡಿಯುವ ನೀರು (ಅಮೃತ ಯೋಜನೆ) ಯೋಜನೆಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.
‘ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 11 ವಾರ್ಡ್‌ಗಳಿದ್ದು, ಮೂಲಸೌಕರ್ಯಗಳಲ್ಲಿ ಒಂದಾದ ಶುದ್ಧ ಕುಡಿಯುವ ನೀರಿನ ಪೂರೈಕೆ ಕಾಮಗಾರಿಯನ್ನು ಗುತ್ತಿಗೆದಾರರು ನಿಗದಿತ ಅವಧಿಯಲ್ಲಿ ಮುಗಿಸುವ ಜೊತೆಗೆ ಉತ್ತಮ ಗುಣಮಟ್ಟ ಕಾಯ್ದುಕೊಳ್ಳಬೇಕು. ಕಾಮಗಾರಿ ಸಂದರ್ಭದಲ್ಲಿ ಸಾರ್ವಜನಿಕರಿಗೆ ಹಾಗೂ ಸಾರ್ವಜನಿಕ ಆಸ್ತಿ ಪಾಸ್ತಿಗಳಿಗೆ ತೊಂದರೆಯಾಗದಂತೆ ಎಚ್ಚರಿಕೆ ವಹಿಸಬೇಕು’ ಎಂದರು.
ಕಾರ್ಯಕ್ರಮದಲ್ಲಿ ನಗರ ಕುಡಿಯುವ ನೀರು ಇಲಾಖೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಮಂಜುನಾಥ್, ಸಹಾಯಕ ಎಂಜಿನಿಯರ್ ಕೃಪ, ಪ.ಪಂ ಮುಖ್ಯಾಧಿಕಾರಿ ಸ್ಟೀಫನ್ ಪ್ರಕಾಶ್, ಸದಸ್ಯೆ ತಾಹಿರಾ ಬೇಗಂ, ಉಮಾ ರವಿಪ್ರಕಾಶ್, ಲೊಕೇಶ್, ಹನುಮಂತೇಗೌಡ, ಮಂಜುನಾಥ್, ದೊರೆಗೌಡ, ರುದ್ರೇಗೌಡ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.