ಅರಕಲಗೂಡು: ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಸರ್ಕಾರ ಒದಗಿಸುವ ಪೌಷ್ಟಿಕಾಂಶವುಳ್ಳ ಆಹಾರ ಸಾಮಗ್ರಿಗಳನ್ನು ತಲುಪಿಸುವ ಮೂಲಕ ಬಾಣಂತಿಯರು ಮತ್ತು ಮಕ್ಕಳ ಅಪೌಷ್ಟಿಕತೆ ಹೋಗಲಾಡಿಸಬೇಕು ಎಂದು ಮಲ್ಲಿಪಟ್ಟಣ ಗ್ರಾಮ ಪಂಚಾಯಿತಿ ಅಧ್ಯಕ್ಷ ಎಂ.ಆರ್. ರಂಗಸ್ವಾಮಿ ತಿಳಿಸಿದರು.
ತಾಲ್ಲೂಕಿನ ಮಲ್ಲಿಪಟ್ಟಣ ಸಮುದಾಯ ಭವನದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಹೆಲ್ತ್ ಪ್ರಮೋಷನ್ ಟ್ರಸ್ಟ್, ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಗ್ರಾಮ ಪಂಚಾಯಿತಿಗಳ ಆಶ್ರಯದಲ್ಲಿ ಈಚೆಗೆ ಹಮ್ಮಿಕೊಂಡಿದ್ದ ಆರೋಗ್ಯ ಅಮೃತ ಅಭಿಯಾನ ಉದ್ಘಾಟಿಸಿ ಅವರು ಮಾತನಾಡಿದರು.
ಮಕ್ಕಳು ಮತ್ತು ಬಾಣಂತಿಯರಲ್ಲಿ ಅಪೌಷ್ಟಿಕತೆ ನಿವಾರಿಸಲು ಸರ್ಕಾರ ಪೌಷ್ಟಿಕಾಂಶವುಳ್ಳ ಆಹಾರ ಸಾಮಗ್ರಿಗಳನ್ನು ನೀಡುತ್ತಿದ್ದು, ಇವುಗಳನ್ನು ಸಮರ್ಪಕವಾಗಿ ತಲುಪಿಸಬೇಕು. ಗ್ರಾಮೀಣ ಭಾಗದ ಜನರ ಆರೋಗ್ಯ ಕಾಪಾಡಬೇಕು. ಸ್ವಚ್ಛತೆಗೆ ಒತ್ತು ನೀಡಬೇಕು ಎಂದರು.
ಸರ್ಕಾರಿ ಆಸ್ಪತ್ರೆ ವೈದ್ಯಾಧಿಕಾರಿ ಡಾ. ಕೌಶಿಕ್ ಮಾತನಾಡಿದರು. ಪಿಡಿಒ ಅರುಣ್ ಕುಮಾರ್, ಮಾಜಿ ಉಪಾಧ್ಯಕ್ಷೆ ಜಯಲಕ್ಷ್ಮೀ, ಸದಸ್ಯರಾದ ಸುಮಿತ್ರಮ್ಮ, ಪೂಜಾ, ಪ್ರಕಾಶ್, ಚಂದ್ರೇಗೌಡ, ಆರೋಗ್ಯ ನಿರೀಕ್ಷಕ ಲಕ್ಷ್ಮಣಗೌಡ, ಶುಶ್ರೂಷಕಿಯರು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.