ADVERTISEMENT

ಬೇಲೂರು | ಕಾಡಾನೆ ದಾಳಿಯಿಂದ ಬೆಳೆನಾಶ: ಮನನೊಂದ ರೈತ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 11 ಮೇ 2024, 13:39 IST
Last Updated 11 ಮೇ 2024, 13:39 IST
ಮಹೇಶ್
ಮಹೇಶ್   

ಬೇಲೂರು: ಕಾಡಾನೆ ದಾಳಿಯಿಂದ ಬೆಳೆ ನಾಶವಾಗಿದ್ದರಿಂದ ಮನನೊಂದು ತಾಲ್ಲೂಕಿನ ಚಿಕ್ಕಸಾಲಾವರ ಗ್ರಾಮದ ರೈತ ಮಹೇಶ (55) ಶನಿವಾರ ಆತ್ಮಹತ್ಯೆ ಮಾಡಿಕೊಂಡಿದ್ದರೆ.

ಮಹೇಶ್ ವಿವಿಧ ಸಂಘ ಸಂಸ್ಥೆ, ಬ್ಯಾಂಕ್ ಹಾಗೂ ಖಾಸಗಿ ವ್ಯಕ್ತಿಗಳಿಂದ ಕೈಸಾಲ ಪಡೆದು ತಮ್ಮ ಒಂದೂವರೆ ಎಕರೆ ಜಮೀನಿನಲ್ಲಿ ಶುಂಠಿ, ಜೋಳ ಮುಂತಾದ ಬೆಳೆಯನ್ನು ಬೆಳೆದಿದ್ದರು. ಹಲವಾರು ದಿನಗಳಿಂದ ಬೀಡುಬಿಟ್ಟಿರುವ ಕಾಡಾನೆಗಳ ಹಿಂಡು ಬುಧವಾರ ರಾತ್ರಿ ನಮ್ಮ ಜಮೀನಿಗೆ ದಾಳಿ ಮಾಡಿ ಕಷ್ಟ ಪಟ್ಟು ಬೆಳೆದಿದ್ದ ಬೆಳೆಯನ್ನು ತುಳಿದು ನಾಶ ಮಾಡಿತ್ತು. ಬೆಳೆದ ಬೆಳೆ ನಾಶವಾದ ಕಾರಣ ಮಾಡಿದ್ದ ಸಾಲವನ್ನು ತೀರಿಸುವುದು ಹೇಗೆ ಎಂಬ ಬೇಸರದಿಂದ ಕ್ರಿಮಿನಾಶಕ ಸೇವಿಸಿದ್ದರು. ಚಿಕಿತ್ಸೆಗಾಗಿ ಹಾಸನದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಸಂಬಂಧ ಅರೇಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾಡಾನೆಗಳು ಒಂದು ಕಡೆ ಮನುಷ್ಯರ ಮೇಲೆ ದಾಳಿ ನಡೆಸಿ ಸಾವುಗಳು ಸಂಭವಿಸುತ್ತಿವೆ. ಇನ್ನೊಂದು ಕಡೆ ಬೆಳೆ ಹಾನಿಯಿಂದ ಕೃಷಿಕರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಆತ್ಮಹತ್ಯೆಗೆ ಶರಣಾದ ಬಡ ರೈತನ ಕುಟುಂಬಕ್ಕೆ ಸರ್ಕಾರ ಸೂಕ್ತ ಪರಿಹಾರ ನೀಡಬೇಕು ಹಾಗೂ ಕಾಡಾನೆಗಳ ಸ್ಥಳಾಂತರಕ್ಕೆ ಶ್ರೀಘ್ರವಾಗಿ ಕ್ರಮ ಕೈಗೊಳ್ಳಬೇಕು, ಇಲ್ಲವಾದಲ್ಲಿ ಜಿಲ್ಲಾಧಿಕಾರಿ ಕಚೇರಿಯ ಮುಂದೆ ಧರಣಿ ನಡೆಸಲಾಗುವುದು ಎಂದು ಕಾಫಿ ಬೆಳೆಗಾರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಅದ್ದೂರಿ ಕುಮಾರ್ ಹಾಗೂ ಪ್ರಧಾನಕಾರ್ಯದರ್ಶಿ ಸಂಜಯ್ ಕೌರಿ ಎಚ್ಚರಿಕೆ ನೀಡಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.