ಹಾಸನ: ‘ಹಾಸನಾಂಬೆ ಜಾತ್ರಾ ಮಹೋತ್ಸವದ ವಿಶೇಷ ಟಿಕೆಟ್ ಮಾರಾಟ ಹಾಗೂ ಕಾಣಿಕೆಯಿಂದ ಈ ಬಾರಿ ದಾಖಲೆಯ ₹12.63 ಕೋಟಿ ಆದಾಯ ಸಂಗ್ರಹವಾಗಿದೆ’ ಎಂದು ದೇವಸ್ಥಾನ ಆಡಳಿತಾಧಿಕಾರಿ ಮಾರುತಿ ತಿಳಿಸಿದರು.
ಹುಂಡಿ ಎಣಿಕೆ ನಂತರ ಸುದ್ದಿಗಾರರಿಗೆ ಮಾಹಿತಿ ನೀಡಿದ ಅವರು, ‘ಕಳೆದ ಬಾರಿಗಿಂತ ಈ ಬಾರಿ ಹೆಚ್ಚಿನ ಪ್ರಮಾಣದಲ್ಲಿ ಆದಾಯ ಬಂದಿದ್ದು, ಭಕ್ತರ ಸಂಖ್ಯೆಯೂ ಹೆಚ್ಚಾಗಿತ್ತು’ ಎಂದರು.
‘ಅ.24ರಿಂದ ನ.3ರವರೆಗೆ ನಡೆದ ಹಾಸನಾಂಬ ಜಾತ್ರಾ ಮಹೋತ್ಸವ ವೇಳೆ ವಿಶೇಷ ದರ್ಶನದ ಟಿಕೆಟ್ ಹಾಗೂ ಲಾಡು ಮಾರಾಟದಿಂದ ₹9.67 ಕೋಟಿ ಸಂಗ್ರಹವಾಗಿದೆ. ಹಾಸನಾಂಬೆ ಹಾಗೂ ಸಿದ್ದೇಶ್ವರ ದೇವಾಲಯದ ಆವರಣದಲ್ಲಿ ಇಟ್ಟಿದ್ದ 20 ಕಾಣಿಕೆ ಹುಂಡಿಯಲ್ಲಿ ₹2.55 ಕೋಟಿ ಸಂಗ್ರಹವಾಗಿದೆ. ಭಕ್ತರು ತಮ್ಮ ಕೋರಿಕೆಗಳನ್ನು ಚೀಟಿಯಲ್ಲಿ ಬರೆದು ಹುಂಡಿಗೆ ಹಾಕಿದ್ದು, ಅವುಗಳನ್ನು ಬಹಿರಂಗಪಡಿಸುವುದಿಲ್ಲ’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.